Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಪಾರ್ಶ್ವನಾಥ ಶಾಲೆಯಲ್ಲಿ ಮಕ್ಕಳ ಹಬ್ಬ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಫೆ. 26 : ನಗರದ ಪಾರ್ಶ್ವನಾಥ ವಿದ್ಯಾ ಸಂಸ್ಥೆಯವತಿಯಿಂದ ನಡೆಯುತ್ತಿರುವ ಎಲ್.ಕೆ.ಜಿ.ಮತ್ತು ಯು.ಕೆ.ಜಿ.ಯ ಮಕ್ಕಳ ಹಬ್ಬವನ್ನು ನಗರದ ರೂಪವಾಣಿ ರಸ್ತೆಯಲ್ಲಿನ ಪಾರ್ಶ್ವನಾಥ ಭವನದಲ್ಲಿ ನಿನ್ನೆ ಸಂಜೆ (ಫೆಬ್ರವರಿ. 25, ಮಂಗಳವಾರ) ನಡೆಸಲಾಯಿತು.

ಸಮಾರಂಭದಲ್ಲಿ ಭಾಗವಹಿಸಿದ್ದ ಪಾರ್ಶ್ವನಾಥ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಾಬುಲಾಲ್‍ಜೈನ್ ಮಾತನಾಡಿ ನಮ್ಮ ಶಾಲೆಯಲ್ಲಿ 575 ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಇವರಿಗೆ ಪಠ್ಯದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಸಹಾ ಕಲಿಸಲಾಗುತ್ತಿದೆ. ಇದರೊಂದಿಗೆ ಸಾಮಾಜಿಕ ಅರಿವನ್ನು ಸಹಾ ಮೂಡಿಸಲಾಗುತ್ತಿದೆ. ಇಂದಿನ ಮಕ್ಕಳೇ ಮುಂದಿನ  ಪ್ರಜೆಗಳು ಈ ಹಿನ್ನಲೆಯಲ್ಲಿ ಮಕ್ಕಳಿಗೆ ಉತ್ತಮವಾದ ಸಂಸ್ಕಾರವನ್ನು ಶಾಲೆಯಲ್ಲಿ ಕಲಿಸಲಾಗುತ್ತಿದೆ, ನಮ್ಮ ರಾಷ್ಟ್ರೀಯ ದಿನಾಚರಣೆಗಳನ್ನು ಹಾಗೂ ಹಬ್ಬಗಳನ್ನು ಸಹಾ ಮಕ್ಕಳಿಂದಲೇ ಮಾಡಿಸಿ ಅದರ ಅರ್ಥವನ್ನು ತಿಳಿಸಲಾಗುತ್ತದೆ.ಈ ವರೆಗೂ ಹಿಂದಿಯಲ್ಲಿ ಭೋಧನೆ ಇದ್ದ ಶಾಲೆಯನ್ನು ಈಗ ಆಂಗ್ಲ ಭಾಷಾ ಶಾಲೆಯನ್ನಾಗಿ ಪರಿವರ್ತನೆ ಮಾಡಲಾಗಿದೆ ಎಂದರು.

ಪಾರ್ಶ್ವನಾಥ ವಿದ್ಯಾಸಂಸ್ಥೆಯ ನಿರ್ದೆಶಕರಾದ ಜವೇರಿಲಾಲ್‍ರವರು ಶಾಲಾ ಅಭಿವೃದ್ದಿಯ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ನೀಡಿದರು.ಇದೇ ಸಂದರ್ಭದಲ್ಲಿ ಎಲ್.ಕೆ.ಜಿ.ಹಾಗೂ ಯು.ಕೆ.ಜಿಯಲ್ಲಿ ಉತ್ತಮವಾದ ಅಂಕಗಳನ್ನು ಪಡೆದ ಮಕ್ಕಳನ್ನು ಗೌರವಿಸಲಾಯಿತು, ನಂತರ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನ ಮಾಡುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಪಾರ್ಶ್ವನಾಥ ವಿದ್ಯಾ ಸಂಸ್ಥೆಯ ಸಲಹಾ ಸಮಿತಿಯ ಸದಸ್ಯರಾದ ಪುಕರಾಜ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ಗೀಸುಲಾಲ್,ಉಪಾಧ್ಯಕ್ಷರಾದ ಉತ್ತಮಚಂದ್‍ಸುರಾನ, ಕಾರ್ಯದರ್ಶಿ ಸುರೇಶ್‍ಕುಮಾರ್, ನಿರ್ದೆಶಕರಾದ ವಿಫುಲ್ ಜೈನ್, ಮಹಾವೀರ್ ಜೈನ್, ಆಶಿಷಿ ಕುಮಾರ್, ಉದ್ಯಮಿ ರಾಜೇಶ್‍ಜೈನ್, ಶಾಲಾಮುಖ್ಯೋಪಾಧ್ಯಯರಾದ ನಾಜಿಮ್ ಭಾಗವಹಿಸಿದ್ದರು.

ವಿಜಯಲಕ್ಷೀ ಸ್ವಾಗತಿಸಿದರು. ಆಯಿಷ ಕಾರ್ಯಕ್ರಮ ನಿರೂಪಿಸಿದರು.ಗೀತಾ ವಂದಿಸಿದರು. ಶಾಂತಕುಮಾರಿ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...