Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಕಟ್ಟಡ ಕಾರ್ಮಿಕರಿಗೆ ವೈಜ್ಞಾನಿಕ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಐಟಿಯು ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 30 : ಕಟ್ಟಡ ಕಾರ್ಮಿಕರಿಗೆ ವೈಜ್ಞಾನಿಕ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿ.ಐ.ಟಿ.ಯು. ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

 

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಲಾಕ್ ಲೇಬರ್ ಕೋಡನ್ನು ಕೂಡಲೆ ಸರ್ಕಾರ ರದ್ದುಪಡಿಸಬೇಕು. ಕೇಂದ್ರ ಚುನಾವಣಾ ಆಯೋಗ ಮತದಾರರ ಮತಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುತ್ತಿರುವುದರಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಮದುವೆ ಸಹಾಯ ಧನ ನಿಂತಿದೆ. ಕೂಡಲೆ ಪುನರ್ ಆರಂಭಿಸಬೇಕು. ಕಟ್ಟಡ ಕಾರ್ಮಿಕರು ಮನೆಗಳನ್ನು ನಿರ್ಮಿಸಿಕೊಳ್ಳಲು ಐದು ಲಕ್ಷ ರೂ.ಗಳ ನೆರವು ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

 

ಸಿ.ಐ.ಟಿ.ಯು.ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‍ಪೀರ್, ಸಂಚಾಲಕ ತಿಪ್ಪೇಸ್ವಾಮಿ, ಡಿ.ಎಂ.ಮಲಿಯಪ್ಪ, ನಿಂಗಮ್ಮ, ಕಟ್ಟಡ ಕಾರ್ಮಿಕರು, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now