ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 16 : ನಗರಸಭೆಯ ಅಧ್ಯಕ್ಷ ಮತ್ತು ಉಪಾದ್ಯಕ್ಷ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಬಿಜೆಪಿ ನಗರಸಭಾ ಸದಸ್ಯರನ್ನು ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ ಆದೇಶಿಸಿದ್ದಾರೆ.
1 ನೇ ವಾರ್ಡಿನ ಸದಸ್ಯೆ ನಾಗಮ್ಮ,
17 ನೇ ವಾರ್ಡಿನ ಸದಸ್ಯ ಜಯ್ಯಪ್ಪ,
30 ನೇ ವಾರ್ಡಿನ ಸದಸ್ಯ ಮಂಜಣ್ಣ ಮತ್ತು
33 ನೇ ವಾರ್ಡಿನ ಸದಸ್ಯೆ ಶ್ರೀದೇವಿ ಚಕ್ರವರ್ತಿ ಅವರು ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡ ಸದಸ್ಯರು.
ಆಗಸ್ಟ್ 26 ರಂದು ನಡೆದ ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ವಿಪ್ ಜಾರಿ ಮಾಡಿದ್ದರೂ ಸಹಾ ವಿಪ್ ಅನ್ನು ಕಡೆಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಎ. ಮುರಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್