ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜುಲೈ 12: ಜಿಲ್ಲಾ ಕೇಂದ್ರ ಚಿತ್ರದುರ್ಗ ನಗರದ ಪ್ರಮುಖ ರಸ್ತೆ ಅಗಲೀಕರಣ ಕಡ್ಡಾಯವಾಗಿ ಆಗಲೇಬೇಕು. ಈ ನಿಟ್ಟಿನಲ್ಲಿ ಅಗತ್ಯ ಪೂರ್ವಾನುಮತಿ ಪಡೆಯುವ ಸಲುವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಚಿತ್ರದುರ್ಗ ನಗರದದಲ್ಲಿ ಹಾದುಹೋಗಿರುವ ಹಳೆಯ ಪುಣೆ-ಬೆಂಗಳೂರು ರಸ್ತೆಯನ್ನು ಅಗಲೀಕರಣಗೊಳಿಸುವ ಮತ್ತು ಅತಿಕ್ರಮ ತೆರವುಗೊಳಿಸುವ ಸಂಬಂಧ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ನಗರದದಲ್ಲಿ ಹಾದುಹೋಗಿರುವ ಹಳೆ ಪುಣೆ-ಬೆಂಗಳೂರು ರಸ್ತೆಯನ್ನು ಚಳ್ಳಕೆರೆ ಗೇಟ್‍ನಿಂದ ಪ್ರವಾಸಿ ಮಂದಿರ ವೃತ್ತ, ಗಾಂಧಿವೃತ್ತ, ಕನಕ ವೃತ್ತ ವರೆಗಿನ ಮಾರ್ಗದಲ್ಲಿ ಅಗಲೀಕರಣಗೊಳಿಸುವ ಸಂಬಂಧ ಸರ್ಕಾರದಿಂದ ವಿವಿಧ ಪ್ರಕ್ರಿಯೆಗಳಿಗೆ ಪಡೆಯಬೇಕಿರುವ ಪೂರ್ವಾನುಮತಿಗಾಗಿ ಶೀಘ್ರ ಪ್ರಸ್ತಾವನೆ ಸಲ್ಲಿಸಬೇಕು. ಬಳಿಕ ಸರ್ಕಾರದ ಮಟ್ಟದಲ್ಲಿ ತ್ವರಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಬೇಕಾದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಚಿತ್ರದುರ್ಗ ನಗರವು ದಿನೇ ದಿನೇ ಬೆಳವಣಿಗೆ ಆಗುತ್ತಿದೆ. ಚಿತ್ರದುರ್ಗ ನಗರಸಭೆ ಮೇಲ್ದರ್ಜೆಗೇರಿಸಲು ಈಗಾಗಲೇ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ಚಿತ್ರದುರ್ಗ ನಗರ ಮೂಲಕ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿದ್ದು, ಜಿಲ್ಲೆಯಲ್ಲಿ ಸಂಭವಿಸುವ ಅಪಘಾತಗಳ ಸಂಖ್ಯೆಯೂ ಹೆಚ್ಚಿದೆ. ಇತ್ತೀಚೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿಯೂ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಇಲ್ಲಿನ ಕಿರಿದಾದ ರಸ್ತೆಗಳು, ಜನಸಂಖ್ಯೆ, ಟ್ರಾಫಿಕ್ ಸಮಸ್ಯೆ ಮುಂತಾದವುಗಳನ್ನು ಗಮನದಲ್ಲಿರಿಸಿಕೊಂಡು, ಸಮಸ್ಯೆಗಳ ನಿವಾರಣೆಗೆ ನಗರದ ಪ್ರಮುಖ ರಸ್ತೆ ಅಗಲೀಕರಣ ಕಾರ್ಯ ಮಾಡಲೇಬೇಕಿದೆ. ರಸ್ತೆ ಅಗಲೀಕರಣ ಸಂಬಂಧ ಈಗಾಗಲೆ ಅಧಿಕಾರಿಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಸೋಮಶೇಖರ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್