Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : 15 ದಿನಗಳಲ್ಲಿ ಖಾಲಿ ನಿವೇಶನ ಸ್ವಚ್ಛಗೊಳಿಸಿ, ನಾಮಫಲಕ ಅಳವಡಿಸಿ : ನಗರಸಭೆ ಅಧ್ಯಕ್ಷರ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 04 : ನಗರದ ಖಾಲಿ ನಿವೇಶನಗಳಲ್ಲಿ ಪೊದೆಯಂತೆ ಗಿಡ ಗಂಟೆಗಳು ಬೆಳೆದಿರುವುದರಿಂದ ನಗರದ ಸೌಂದರ್ಯ ಹಾಳಾಗುತ್ತಿದೆಯಲ್ಲದೆ. ವಿಷ ಜಂತುಗಳು, ಕೆಟ್ಟ ಹುಳುಗಳು ಸೇರಿಕೊಳ್ಳುತ್ತಿರುವ ಕಾರಣಕ್ಕಾಗಿ ಮಾಲೀಕರುಗಳು ತಮ್ಮ ತಮ್ಮ ನಿವೇಶನಗಳಲ್ಲಿ ಬೆಳೆದಿರುವ ಗಿಡ ಪೊದೆಗಳನ್ನು ಇನ್ನು ಹದಿನೈದು ದಿನಗಳಲ್ಲಿ ತೆಗೆಸಿ ಸ್ವಚ್ಚಗೊಳಿಸಿಕೊಂಡು ಕಾಂಪೌಂಡ್ ನಿರ್ಮಿಸಿ ಮಾಲೀಕರ ಹೆಸರು, ವಿಳಾಸ, ಖಾತಾ/ಅಸೆಸ್‍ಮೆಂಟ್ ಸಂಖ್ಯೆ, ಅಳತೆ, ಪಿ.ಐ.ಡಿ.ನಂ. ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನೊಳಗೊಂಡ ನಾಮಫಲಕ ಅಳವಡಿಸಿ ಬಂದೋಬಸ್ತ್ ಮಾಡಿಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷೆ ಸುಮಿತ ಬಿ.ಎನ್.ಈರುಳ್ಳಿ ರಘು ಮನವಿ ಮಾಡಿದ್ದಾರೆ.

 

ಒಂದು ವೇಳೆ ಮಾಲೀಕರುಗಳು ತಮ್ಮ ನಿವೇಶನಗಳನ್ನು ಸ್ವಚ್ಚಗೊಳಿಸಿಕೊಳ್ಳದಿದ್ದರೆ ನಗರಸಭೆಯಿಂದ ಗಿಡ ಗಂಟೆಗಳನ್ನು ತೆಗೆಸಿ ಅದಕ್ಕೆ ತಗಲುವ ವೆಚ್ಚವನ್ನು ಕೆ.ಎಂ.ಬುಕ್‍ನಲ್ಲಿ ಷರಾ ಬರೆದು ಮಾಲೀಕರುಗಳಿಂದ ವಸೂಲಿ ಮಾಡಲಾಗುವುದಲ್ಲದೆ ದಂಡ ವಿಧಿಸಲಾಗುವುದು. ಇದಕ್ಕೆ ನಿವೇಶನಗಳ ಮಾಲೀಕರುಗಳು ಸ್ಪಂದಿಸದಿದ್ದರೆ ಖಾತಾ, ಇ-ಸ್ವತ್ತುಗಳನ್ನು ನೀಡಲಾಗುವುದಿಲ್ಲ ಎಂದು ಅಧ್ಯಕ್ಷೆ ಸುಮಿತ ಬಿ.ಎನ್.ಈರುಳ್ಳಿ ರಘು ಎಚ್ಚರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...