ಚಿತ್ರದುರ್ಗ | ಡಿವೈಡರ್ ಗೆ ಡಿಕ್ಕಿ ; ಓರ್ವ ವ್ಯಕ್ತಿಗೆ ಗಾಯ

1 Min Read

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ದ್ವಿಚಕ್ರ ವಾಹನ ಸವಾರ ಡಿವೈಡರ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯವಾದ ಘಟನೆ ರಾತ್ರಿ 7 : 30 ರ ವೇಳೆಗೆ ನಡೆದಿದೆ.

ನಗರದ ಕೆಇಬಿ ಕಲ್ಯಾಣ ಮಂಟಪದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಾದುಹೋಗುವಾಗ ಹೆದ್ದಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣವೇ ಅಲ್ಲಿಯೇ ಹೋಗುತ್ತಿದ್ದ ಸ್ಥಳೀಯರು ಗಾಯಗೊಂಡ ಆತನನ್ನು ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರು.

ಗಾಯಗೊಂಡ ವ್ಯಕ್ತಿಯನ್ನು ಪಿಳ್ಳೇಕೆರೆನಹಳ್ಳಿಯ ಶಿವಕುಮಾರ್ ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಕೂಡಲೇ ಅವರ ಸಂಬಂಧಿ ಘಟನಾ ಸ್ಥಳಕ್ಕೆ ಆಗಮಿಸಿದರು.

ಗಾಢವಾದ ಕತ್ತಲು :
ಚಿತ್ರದುರ್ಗದಲ್ಲಿ ಹಾದು ಹೋಗುವ ಈ ಹೆದ್ದಾರಿಯಲ್ಲಿ ಚಳ್ಳಕೆರೆ ಗೇಟ್ ನಿಂದ ಹಿಡಿದು ಮುರುಘಾಮಠದ ತನಕ ರಸ್ತೆ ಬದಿಯಲ್ಲಿ ಯಾವುದೇ ಬೀದಿದೀಪಗಳಿಲ್ಲ. ರಾಷ್ಟ್ರೀಯ ಹೆದ್ದಾರಿ ಮತ್ತು ನಗರಸಭೆ ಅಧಿಕಾರಿಗಳಿಗೆ ಈ ವಿಚಾರವಾಗಿ ಸಾಕಷ್ಟು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಪೂರ್ಣ ಕತ್ತಲು ಇರುವುದರಿಂದ ಈ ಅಪಘಾತ ಸಂಭವಿಸಿದೆ ಎಂದು ಅಲ್ಲಿ ನೆರೆದಿದ್ದ ಸಾರ್ವಜನಿಕರರು ಆಕ್ರೋಶ ವ್ಯಕ್ತಪಡಿಸಿದರು.

Share This Article
Enable Notifications OK No thanks