ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಪಿಳ್ಳೇಕೆರೆನಹಳ್ಳಿ ವಾಸಿ ಡಿ. ಕುಮಾರ್ (48 ವರ್ಷ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಪಿಳ್ಳೆಕೆರೆನಹಳ್ಳಿಯ ರುದ್ರ ಭೂಮಿಯಲ್ಲಿ ಇಂದು ಮಧ್ಯಾನ್ಹ 3 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕುಮಾರ್ ಅವರು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ನಿಧನಕ್ಕೆ ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.


