ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಡಿ.18: ಕೇಂದ್ರದ ಬಿಜೆಪಿ ನಾಯಕರುಗಳು ಸಿಬಿಐ ಹಾಗೂ ಇಡಿ ಅಧಿಕಾರಿಗಳನ್ನು ರಾಜಕೀಯ ದುರ್ಬಳಕೆ ಮಾಡಿಕೊಂಡು ಕಾಂಗ್ರೇಸ್ ಮುಖಂಡರ ತೇಜೋವಧೆ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಇಂದು ನಗರದಲ್ಲಿ ಬಿಜೆಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ವೇಳೆ ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಕಾಂಗ್ರೇಸ್ ಮುಖಂಡರುಗಳು ಬಂಡವಾಳ ಹೂಡಿ ನ್ಯಾಯಯುತವಾಗಿ ನಡೆಸುತ್ತಾ ಬಂದಿದ್ದಾರೆ. ಆದರೆ ಬಿಜೆಪಿ ನಾಯಕರುಗಳು ಇಡಿ ಹಾಗೂ ಸಿಬಿಐ ಅಧಿಕಾರಿಗಳನ್ನು ರಾಜಕೀಯವಾಗಿ ಬಳಸಿಕೊಂಡು, ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ನಮ್ಮ ನಾಯಕರುಗಳಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇತರೆ ಮುಖಂಡರ ಮೇಲೆ ಕೇಸನ್ನು ಹಾಕಿ, ತೇಜೋವಧೆ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ಎಲ್ಲಾ ವಿಚಾರಣೆ ನಡೆಸಿದ ಬಳಿಕಾ ನಮ್ಮ ನಾಯಕರಿಗೆ ಕ್ಲೀನ್ ಚೀಟ್ ನೀಡಿ ನ್ಯಾಯವನ್ನು ಎತ್ತಿ ಹಿಡಿಯುವ ಮೂಲಕ ಬಿಜೆಪಿಯವರಿಗೆ ಛೀಮಾರಿ ಹಾಕಿದೆ ಎಂದರು.
ಅಧಿಕಾರ ಶಾಶ್ವತ ಅಲ್ಲ. ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಮಾಡುವುದಾದರೆ ರಾಜ ಮಾರ್ಗದಲ್ಲಿ ಮಾಡಿ, ವಾಮ ಮಾರ್ಗದಲ್ಲಿ ಮಾಡುವುದು ಕ್ಷೋಭೆ ತರುವುದಿಲ್ಲ. ಈ ಬಗ್ಗೆ ಸುಪ್ರೀ ಕೋರ್ಟ್ ಕೂಡ ಛೀಮಾರಿ ಹಾಕಿರುವುದನ್ನು ಗಮನಿಸಿ ಎಚ್ಚರದಿಂದ ರಾಜಕೀಯ ಮಾಡಬೇಕು. ಇಲ್ಲವಾದರೆ ಕಾಂಗ್ರೇಸ್ ಕಾರ್ಯಕರ್ತರು ದಂಗೆ ಎಳಬೇಕಾಗುತ್ತದೆ. ನಮ್ಮದು ಅಹಿಂಸಾತ್ಮಕ ಪಕ್ಷ. ನಮ್ಮ ತಾಳ್ಮೆಯನ್ನು ದುರ್ಬಳಕೆ ಮಾಡಿಕೊಂಡರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಂತಹ ಮಹಾನ್ ನಾಯಕ ಗಾಂಧೀಜಿ ಅವರ ಹೆಸರಿನಲ್ಲಿ ಕಾಂಗ್ರೇಸ್ ಪಕ್ಷ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ ಬಿಜೆಪಿಯವರು ಗಾಂಧೀಜಿ ಹೆಸರನ್ನೆ ತೆಗೆದು ಬೇರೆ ಹೆಸರನ್ನು ನಾಮಕರಣ ಮಾಡುತ್ತಿದೆ ಇದು ಸರಿಯಾದ ಕ್ರಮವಲ್ಲ. ಬೇಕಾದರೆ ಮತ್ತೊಂದು ಯೋಜನೆಯನ್ನು ಜಾರಿಗೆ ತಂದು ಬೇಕಾದ ಹೆಸರನ್ನು ನಾಮಕರಣ ಮಾಡಿ ಎಂದು ಸವಾಲು ಹಾಕಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಸಂಪತ್ ಕುಮಾರ್ ಓ ಮ್ಯಲಾರಪ್ಪ..ಶಂಕರ್, ಆರ್.ಕೆ ಸರ್ದಾರ್, ಆಂಜಿನಪ್ಪ, ಆಶಾ, ಅನೀಸ್, ಅಶ್ವಕ್ ಅಲಿ, ಎನ್.ಡಿ.ಕುಮಾರ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











