Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮುಂಗಾರು ಹಂಗಾಮಿಗೆ ಬೆಳೆವಿಮೆ ನೋಂದಣಿ ಪ್ರಕ್ರಿಯೆ ಆರಂಭ : ಇಲ್ಲಿದೆ ಸಂಪೂರ್ಣ ಮಾಹಿತಿ…!

Facebook
Twitter
Telegram
WhatsApp

 

ಚಿತ್ರದುರ್ಗ. ಜೂನ್.01: ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಹೆಸರು (ಮಳೆ ಆಶ್ರಿತ), ಈರುಳ್ಳಿ (ನೀರಾವರಿ) ಬೆಳೆ ವಿಮಾ ನೊಂದಣಿಗೆ  2024ರ ಜುಲೈ 15 ಕೊನೆಯ ದಿನ. ಮುಸುಕಿನ ಜೋಳ (ನೀರಾವರಿ)(ಮಳೆಯಾಶ್ರಿತ), ಜೋಳ (ನೀರಾವರಿ)(ಮಳೆಯಾಶ್ರಿತ), ಸಜ್ಜೆ(ಮಳೆಯಾಶ್ರಿತ),  ಸಾವೆ(ಮಳೆಯಾಶ್ರಿತ), ತೊಗರಿ(ಮಳೆಯಾಶ್ರಿತ),  ಹುರುಳಿ(ಮಳೆಯಾಶ್ರಿತ),  ಸೂರ್ಯಕಾಂತಿ(ನೀರಾವರಿ)(ಮಳೆಯಾಶ್ರಿತ),  ಎಳ್ಳು(ಮಳೆಯಾಶ್ರಿತ), ನೆಲಗಡಲೆ(ಶೇಂಗಾ)(ನೀರಾವರಿ) (ಮಳೆಯಾಶ್ರಿತ),  ಹತ್ತಿ(ನೀರಾವರಿ)(ಮಳೆಯಾಶ್ರಿತ),  ಟೊಮ್ಯಾಟೋ,  ಈರುಳ್ಳಿ(ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ) ಬೆಳೆಗಳಿಗೆ ವಿಮೆ ನೊಂದಣಿಗೆ 2024ರ ಜುಲೈ 31 ಕೊನೆಯ ದಿನವಾಗಿದೆ. ಭತ್ತ (ನೀರಾವರಿ) ರಾಗಿ(ನೀರಾವರಿ) (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ) ಬೆಳೆಗಳ ವಿಮಾ ನೊಂದಣಿಗೆ 2024ರ ಆಗಸ್ಟ್ 16 ಕೊನೆಯ ದಿನವಾಗಿದೆ.

ಈ ಎಲ್ಲಾ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಧಿಸೂಚನೆ ಮಾಡಲಾಗಿದ್ದು, ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ.

ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಆರ್ಥಿಕ ಸಂಸ್ಥೆಗಳು, ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ (Common Service Centers)  ಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾ ಕಂತನ್ನು ನಿಗಧಿತ ಸಮಯದೊಳಗೆ ನಿಯಮಾನುಸಾರ ಅನುಷ್ಟಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳತಕ್ಕದ್ದು, ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದರಿಂಗಾಗುವ ಬೆಳೆ ವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳೆ ನೇರ ಹೊಣೆಗಾರರಾಗಿರುತ್ತಾರೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ.

ಚಿತ್ರದುರ್ಗ ಜಿಲ್ಲೆಗೆ Agriculture Insurance Company of India Limited ಅನುಷ್ಟಾನ ಸಂಸ್ಥೆಯಾಗಿರುತ್ತದೆ.ರೈತರು ನೋಂದಾಣಿಗಾಗಿ ಕಡ್ಡಾಯವಾಗಿ FRUITS  ID (FID) ಹೊಂದಿರಬೇಕು.

ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಾಣಿಯಲ್ಲಿ ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೇ ಸಕಾಲದಲ್ಲಿ ನೋಂದಾವಣೆ ಮಾಡಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

ಸಿಎಂ ಪತ್ನಿ ಹೆಸರಿಗೆ 14 ಮೂಡಾ ಸೈಟ್ ಗಳು : ಸಿದ್ದರಾಮಯ್ಯ ಹೇಳಿದ್ದೇನು..?

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮಪತ್ನಿ ಪಾರ್ವತಿ ಅವರ ಹೆಸರಿನಲ್ಲಿ 14 ಮೂಡಾ ಸೈಟುಗಳನ್ನು ಮಾಡಲಾಗಿದೆ ಎಂಬುದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಐ ಕಾರ್ಯಕರ್ತ ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದಿದ್ದಾರೆ. ಜೊತೆಗೆ ಸಿಎಂ

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

error: Content is protected !!