Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಮೃತ ಆಟೋ ಚಾಲಕನ ಪತ್ನಿಗೆ ಡಿ.ಗ್ರೂಪ್ ನೇಮಕಾತಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 20 : ಚಿತ್ರದುರ್ಗ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಗೆ ಕಾರ್ಮಿಕ ಕಾಯ್ದೆ ನಿಯಮಾನುಸಾರ ಹೊರ ಗುತ್ತಿಗೆ ಆಧಾರದ ಮೇಲೆ ಡಿ.ಗ್ರೂಪ್‍ಗೆ ನೇಮಕಗೊಂಡಿರುವ ಬುರುಜನಹಟ್ಟಿಯ ಹೆಚ್.ಲಕ್ಷ್ಮಿಗೆ ಜಿಲ್ಲಾ ರಕ್ಷಣಾಧಿಕಾರಿ ಶುಕ್ರವಾರ ನೇಮಕಾತಿ ಪತ್ರ ನೀಡಿದರು.

ಪೊಲೀಸರು ಆಟೋ ತಡೆದು ದಂಡ ವಿಧಿಸಿದರೆನ್ನುವ ಕಾರಣಕ್ಕಾಗಿ ಕಳೆದ ಡಿಸೆಂಬರ್‍ನಲ್ಲಿ ಗಾಂಧಿವೃತ್ತದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹೆಚ್ಚಿಕೊಂಡ ತಿಪ್ಪೇಸ್ವಾಮಿ ಸುಟ್ಟ ಗಾಯಗಳಿಂದ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೃತಪಟ್ಟ ಹಿನ್ನೆಲೆಯಲ್ಲಿ ಪತ್ನಿ ಹೆಚ್.ಲಕ್ಷ್ಮಿಗೆ  ಪುಟ್ಟ ಮಗುವಿನೊಂದಿಗೆ ಸಂಸಾರ ಸಾಗಿಸುವುದು ಕಷ್ಟವಾಗುತ್ತದೆನ್ನುವುದನ್ನು ಮನಗಂಡು ಚಿತ್ರದುರ್ಗ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಡಿ.ಗ್ರೂಪ್‍ಗೆ ನೇಮಕ ಮಾಡಿಕೊಂಡು ಮಾನವೀಯತೆ ಮೆರೆದಿರುವುದಕ್ಕೆ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್ ಕುಮಾರ್ ಭಂಡಾರು ಪ್ರಶಂಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಸೋಮಶೇಖರ್, ಚಿತ್ರದುರ್ಗ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಯುವರಾಜ್, ಡಾ.ವೇಣು, ಕರಿಬಸವಯ್ಯ, ಬುರುಜನಹಟ್ಟಿಯ ಜೆ.ಮಂಜುನಾಥ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...