ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 15 : ಉಪ ಮುಖ್ಯಮಂತ್ರಿ, ಕರ್ನಾಟ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರವರ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಜನ್ಮದಿನದಲ್ಲಿ ಭಾಗವಹಿಸಿ ಮಾತನಾಡುತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರ ನಡುವೆ ಸಮನ್ವಯತೆಯಿರುವುದರಿಂದ ರಾಜ್ಯ ಸರ್ಕಾರ ಮೂರು ವರ್ಷಗಳ ಅಧಿಕಾರವಧಿಯನ್ನು ಯಶಸ್ವಿಯಾಗಿ ಪೂರೈಸಿದೆ. ಏಪ್ರಿಲ್‍ನಲ್ಲಿ ನಡೆದ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದು ಪಂಚ ಗ್ಯಾರೆಂಟಿ ಯೋಜನೆಗಳು ಹಾಗೂ ಕಾರ್ಯಕರ್ತರ, ಮುಖಂಡರುಗಳ ಪರಿಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ರಾಜಕೀಯ ಜೀವನದಲ್ಲಿ ಡಿ.ಕೆ.ಶಿವಕುಮಾರ್‍ರವರಿಗೆ ಉನ್ನತ ಸ್ಥಾನಮಾನಗಳು ಸಿಗಲಿ ಎಂದು ಆಶಿಸಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಜೋಡೆತ್ತಿನಂತೆ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ವಿರೋಧ ಪಕ್ಷಗಳ ಟೀಕೆ, ಅಪವಾದಗಳಿಗೆ ಎದೆಗುಂದದೆ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಐದು ಉಚಿತ ಗ್ಯಾರೆಂಟಿಗಳನ್ನು ಜನತೆಗೆ ನೀಡಿದ್ದಾರೆ. ರಾಜಕೀಯದಲ್ಲಿ ಡಿಕೆಶಿ. ಉತ್ತುಂಗ ಸ್ಥಾನಕ್ಕೇರಲಿ ಎಂದು ಹಾರೈಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಟ ವರ್ಗಗಳ ಅಧ್ಯಕ್ಷ ಮಂಜುನಾಥ್, ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಅಬ್ದುಲ್ಲಾ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಅಧ್ಯಕ್ಷ ಟಿಪ್ಪುಖಾಸಿಂಆಲಿ, ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್‍ರವರ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಜೆ.ಮಂಜುನಾಥ, ಸೈಯದ್ ಸೈಫುಲ್ಲಾ, ಇಂದಿರಾ, ಜಿ.ವಿ.ಮಧುಗೌಡ ಗಂಜಿಗಟ್ಟೆ, ದಲಿತ ಮುಖಂಡ ಜಿ.ರಾಜಪ್ಪ, ಕಾಂಗ್ರೆಸ್ ಕಾರ್ಯದರ್ಶಿ ರಮೇಶ್, ನ್ಯಾಯವಾದಿ ಸುದರ್ಶನ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಎಸ್.ಎನ್.ಸುರೇಶ್, ಸೈಯದ್ ಅಫಾಖ್‍ಅಹಮದ್ ಇನ್ನು ಅನೇಕರು ಜನ್ಮದಿನದಲ್ಲಿ ಪಾಲ್ಗೊಂಡಿದ್ದರು.



















