Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಶಾಂತಿ-ಸುವ್ಯವಸ್ಥೆಯೊಂದಿಗೆ ಪರಿಸರಸ್ನೇಹಿ ಗಣೇಶೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ಕರೆ

---Advertisement---

ಚಿತ್ರದುರ್ಗ.ಸೆ.10: ಮುಂಬರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆಗಳ ವೇಳೆ ಕಾನೂನು ಪಾಲನೆ ಕಡ್ಡಾಯವಾಗಿದ್ದು, ಆಯೋಜಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ರಾಸಾಯನಿಕ ಬಣ್ಣ ಹಾಗೂ ಪ್ಲ್ಯಾಸ್ಟರ್ ಆಫ್ ಪ್ಯಾರಿಸ್ ಮುಕ್ತ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರ ಬಳಸಲು ಜಾಗೃತಿ ಮೂಡಿಸಬೇಕು ಎಂದರು.

ಕೇಂದ್ರಸ್ಥಾನದಲ್ಲಿ ಇರಲು ಸೂಚನೆ:
ಜನರ ಜೀವ ಮತ್ತು ಆಸ್ತಿಪಾಸ್ತಿಯ ರಕ್ಷಣೆಯು ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜವಾಬ್ದಾರಿಯಾಗಿದೆ.  ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮಗಳ ಯಶಸ್ಸಿಗೆ ಗಂಭೀರವಾಗಿ ಶ್ರಮಿಸಬೇಕು. ಸಣ್ಣ ಪುಟ್ಟ ಲೋಪದೋಷಗಳಿಗೂ ಆಸ್ಪದ ನೀಡದೆ ಪರಿಶೀಲನಾ ಪಟ್ಟಿ ಆಧಾರದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಬೇಕು. ಗಣೇಶ ವಿಸರ್ಜನೆ ಹಾಗೂ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ನಗರಸಭೆ ಕಮಿಷನರ್, ತಹಶೀಲ್ದಾರ್, ಎಸಿ, ವೈದ್ಯಾಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ. ತುರ್ತು ಸಂದರ್ಭ ಎದುರಾದರೆ ಮೇಲಾಧಿಕಾರಿಗಳ ಹಂತದಲ್ಲಿ ಸಾಕು ಎನ್ನದೆ, ನೇರವಾಗಿ ಜಿಲ್ಲಾಧಿಕಾರಿಗಳಿಂದಲೇ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,
ಉಪವಿಭಾಗಾಧಿಕಾರಿ ಡಾ.ಕಾಂತರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮ ಹಾನಗಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಸಿ.ಸುನೀಲ್ ಕುಮಾರ್, ನಗರಸಭೆ ಆಯುಕ್ತೆ ಲಕ್ಷ್ಮಿ, ಪರಿಸರಾಧಿಕಾರಿ ಪಲ್ಲವಿ ಸೇರಿದಂತೆ  ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವುದು ನಮ್ಮ ಮಹಾಸಂಕಲ್ಪ : ಸಿಎಂ ಡಿಕೆಶಿ

ನಾಡಿನ ರೈತರು, ಶ್ರಮಿಕರು, ಯುವಜನತೆ ಜೊತೆಗೆ ಒಂದೇ ಪಂಕ್ತಿಯಲ್ಲಿ ಕುಳಿತು ಸಹಭೋಜನ ಸವಿದ ಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದ ಜನತೆಗೆ ಸಿಹಿಸುದ್ದಿ : ಸೇವೆ ಒನ್, ರೈತ ಚೈತನ್ಯ ಸೇರಿ 4 ಮಹತ್ವದ ಯೋಜನೆಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

BREAKING : ರಾಜ್ಯದಲ್ಲಿ 1 ಲಕ್ಷ ಸರ್ಕಾರಿ, 5 ಲಕ್ಷ ಖಾಸಗಿ ಉದ್ಯೋಗ ಸೃಷ್ಟಿ, ನಿರಾಶ್ರಿತರಿಗೆ 5 ಲಕ್ಷ ನಿವೇಶನ ಹಂಚಿಕೆ : ಸಿಎಂ ಡಿಕೆಶಿ ಘೋಷಣೆ

ಗಣೇಶೋತ್ಸವದ ಹೆಸರಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ ಅಳವಡಿಕೆ ಮಾರ್ಗಸೂಚಿ ಪ್ರಕಟ : ಇಲ್ಲಿದೆ ಮಾಹಿತಿ

ಹಿಂದೂ ಮಹಾಗಣಪತಿ ಮೆರವಣಿಗೆಗೆ ಬಿಗಿ ಭದ್ರತೆ ಹೇಗಿರಲಿದೆ ; ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ..!