ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 26 : ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿಸುವ ಕುರಿತು ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಜ್ಞಾನ ಭಾರತಂ ಮಿಷನ್ ಸಂಯುಕ್ತಾಶ್ರಯದಲ್ಲಿ ರಾಜ್ಯಾದ್ಯಂತ ಹಸ್ತಪ್ರತಿಗಳ ಸಂರಕ್ಷಣೆ ಕಾರ್ಯ ಪ್ರಾರಂಭಗೊಂಡಿದ್ದು, ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು, ಮತ್ತು ದಾಖಲೆಗಳ ಇಂದಿನ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಇವುಗಳ ಸಮೀಕ್ಷೆ, ಸಂರಕ್ಷಣೆ, ಡಿಜಿಟಲೀಕರಣ, ನೊಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುವಾದ ಮತ್ತು ಪ್ರಕಟಣೆಯನ್ನು ಮಾಡುವ ಮೂಲಕ ಕರ್ನಾಟಕದ ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಒಂದೆ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕ ಪ್ರವೇಶವನ್ನು ಒದಗಿಸಿ ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆಗೆ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಈ ಯೋಜನೆಯಡಿ ದೇಶದಲ್ಲಿರುವ ಹಸ್ತಪ್ರತಿಗಳ ಮಾಹಿತಿಯನ್ನು ಕೇಂದ್ರ ಸರ್ಕಾರವು ಅಭಿವೃದ್ದಿಪಡಿಸಿರುವ ಮೊಬೈಲ್ ಅಪ್ಲಿಕೇಷನ್‍ನಲ್ಲಿ ಅಪ್‍ಲೋಡ್ ಮಾಡುವ ಮೂಲಕ ಸಂಗ್ರಹಣೆಗೊಳ್ಳುವ ಹಸ್ತಪ್ರತಿಗಳ ರಾಷ್ಟ್ರೀಯ ಭಂಡಾರದ ದತ್ತಾಂಶದ ಮಾಹಿತಿಯನ್ನು ವಿಶ್ವಕ್ಕೆ ಹಂಚುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.
ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯನ್ನು 2026 ರ ಮಾರ್ಚ್‍ನಿಂದ ಮೇ ತಿಂಗಳವರೆಗೆ ದಾಖಲೀಕರಣ ಅಭಿಯಾನ ನಡೆಸಲಾಗುತ್ತದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸ್ಥಾಯಿ ಸಮಿತಿಯನ್ನು ಮತ್ತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಹೇಳಿದರು.
ಹಸ್ತ ಪ್ರತಿಗಳ ಸರ್ವೆ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಮಠ ಮಾನ್ಯಗಳು, ಸಂಘ ಸಂಸ್ಥೆಗಳು, ವಿಶ್ವ ವಿದ್ಯಾನಿಲಯಗಳು, ಪರಂಪರಾಗತವಾಗಿ ಸಂಗ್ರಹಿಸಲಾಗಿರುವ ಹಸ್ತ ಪ್ರತಿಗಳನ್ನು ಮನೆಯಲ್ಲಿ ಯಾರಾದರೂ ಇಟ್ಟುಕೊಂಡಿದ್ದರೆ ಜ್ಞಾನ ಭಾರತಂ ಮಿಷನ್ ಅಭಿವೃದ್ದಿಪಡಿಸಿರುವ ಮೊಬೈಲ್ ಅಪ್ಲಿಕೇಷನ್‍ನಲ್ಲಿ ಅಪ್‍ಲೋಡ್ ಮಾಡಬಹುದು. ಇಲ್ಲವೇ ನಮ್ಮ ಗಮನಕ್ಕಾದರೂ ತರಬಹುದೆಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಹ್ಲಾದ್ ಮನವಿ ಮಾಡಿದ್ದಾರೆ.
ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‍ರೆಡ್ಡಿ ಈ ಸಂದರ್ಭದಲ್ಲಿದ್ದರು. ಹೆಚ್ಚಿನ ಮಾಹಿತಿಗಾಗಿ ಮೊ : 9964357859, 9449145557, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಮೊ : 9480226064 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















