ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ನಗರದ ಮೆದೇಹಳ್ಳಿ ರಸ್ತೆಯ ವಾಸಿ ಡಿ.ಹೆಚ್. ವೆಂಕಟಶಿವ ರೆಡ್ಡಿ (65 ವರ್ಷ) ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ,ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಾಳೆ (ಮಾರ್ಚ್. 07) ಬೆಳಿಗ್ಗೆ ನೆವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಡಿ.ಹೆಚ್. ವೆಂಕಟಶಿವ ರೆಡ್ಡಿ ಅವರು ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.


