ಚಿತ್ರದುರ್ಗ. ಆ.21: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ಆಯೋಜಿಸಲಾಗಿದೆ.
ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು 03ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿರುತ್ತಾರೆ. ಆಸಕ್ತರು 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಹಾಗೂ ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7022459064, 8105619020 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
==========









