Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಬೆಳೆ ವಿಮೆ, ಬರ ಪರಿಹಾರ ವಿತರಣೆಯಲ್ಲಿ ತಾರತಮ್ಯ : ರೈತರ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ಪ್ರೆವೆಂಟ್ ಶೋಯಿಂಗ್ ಬೆಳೆ ವಿಮೆ ತುರ್ತಾಗಿ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಬರಗಾಲ ಬೆಳೆ ಪರಿಹಾರ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಬೆಳೆ ವಿಮೆ ಪಾವತಿಯಲ್ಲಿ ಬಹಳಷ್ಟು ತಾರತಮ್ಯವಾಗಿರುವುದರಿಂದ ಜಿಲ್ಲಾಡಳಿತ ಕೂಡಲೆ ಕುಂದು ಕೊರತೆ ಸಭೆ ಕರೆದು ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಬರಗಾಲವಿದೆ. ಬಿತ್ತನೆಯಾಗದಿರುವುದರಿಂದ ಬೆಳೆ ವಿಮೆ ಪಾವತಿಸಿರುವ ಪ್ರೆವೆಂಟ್ ಶೋಯಿಂಗ್ ಬೆಳೆ ವಿಮೆ ಕೊಡುವುದಾಗಿ ನಾಲ್ಕೈದು ತಿಂಗಳ ಹಿಂದೆ ಸಭೆ ನಡೆಸಿ ಶೇ.25 ಪರ್ಸೆಂಟ್ ಪಾವತಿಸುವುದಾಗಿ ಭರವಸೆ ನೀಡಿದ್ದರೂ ಇದುವರೆವಿಗೂ ಯಾವ ರೈತನಿಗೂ ಬೆಳೆ ವಿಮೆ ಹಣ ಜಮಾ ಆಗಿರುವುದಿಲ್ಲ. ಬರಗಾಲ ಘೋಷಣೆಯಾಗಿ ಐದಾರು ತಿಂಗಳು ಕಳೆದಿದ್ದರೂ ಬರ ಪರಿಹಾರ ಹಣ ಪಾವತಿಯಾಗಿಲ್ಲ. ಎಕರೆಗೆ ಕೇವಲ
ಎರಡುವರೆ ಸಾವಿರ ಮತ್ತು ಐದು ಸಾವಿರ ರೂ.ಗಳೆಂದು ಸರ್ಕಾರ ಹೇಳುತ್ತಿದೆ. ಇಷ್ಟು ಪರಿಹಾರ ನೀಡಿದರೆ ರೈತರಿಗೆ ನಷ್ಟವಾಗುತ್ತದೆ. ಕನಿಷ್ಟ ಒಂದು ಎಕರೆಗೆ 25 ಸಾವಿರ ರೂ. ಪರಿಹಾರ ಕೊಡಬೇಕೆಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ತೋಟಗಳನ್ನು ಉಳಿಸಿಕೊಳ್ಳಲು ರೈತರು ಟ್ಯಾಂಕರ್‍ಗಳ ಮೂಲಕ ನೀರು ಉಣಿಸುತ್ತಿದ್ದಾರೆ. ಅಡಿಕೆ ಫಸಲಿಲ್ಲದೆ ರೈತರು ನಷ್ಟದಲ್ಲಿದ್ದಾರೆ. ಅಡಿಕೆ ದಾಳಿಂಬೆ ಬೆಳೆಗಳಿಗೆ
2024-25 ನೇ ಸಾಲಿನ ಬೆಳೆ ವಿಮೆ ಪಾವತಿಯಾಗಿದೆ. ಬೆಳೆ ವಿಮೆ ಕಂಪನಿಯ ಮಾಲೀಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ರೈತ ಮುಖಂಡರುಗಳೊಂದಿಗೆ ಸಭೆ ಕರೆದು ಚರ್ಚಿಸಿ ಬೆಳೆ ವಿಮೆ ಕಂಪನಿಗಳಿಂದ ಹೆಚ್ಚಿನ ಪರಿಹಾರ ಕೊಡಿಸುವಂತೆ ರೈತರು ಆಗ್ರಹಿಸಿದರು.

ರೆಡ್ಡಿಹಳ್ಳಿ ವೀರಣ್ಣ, ಚಿಕ್ಕಬ್ಬಿಗೆರೆ ನಾಗರಾಜ್, ಕೆ.ಟಿ.ತಿಪ್ಪೇಸ್ವಾಮಿ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಕಾಂತರಾಜ್, ಸಿದ್ದರಾಮಣ್ಣ, ತಿಮ್ಮಣ್ಣ, ಮಲ್ಲಿಕಾರ್ಜುನ್, ಕೊಟ್ರಬಸಪ್ಪ
ತಿಪ್ಪೇಸ್ವಾಮಿ, ಮಾರುತಿ, ಸದಾಶಿವ, ಸಿದ್ದಣ್ಣ, ರಾಮರೆಡ್ಡಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now