ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಟಿ. ಮಹಂತೇಶ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿದ್ದು, 2015 ರ ಐಎಎಸ್ ಅಧಿಕಾರಿ ವೆಂಕಟೇಶ್. ಟಿ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.
2014 ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಅಕ್ಟೋಬರ್ 23, 2022 ರಂದು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಪ್ರಸ್ತುತ ಇವರನ್ನು ವರ್ಗಾವಣೆ ಮಾಡಿದ್ದು ಇವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









