ಚಿತ್ರದುರ್ಗ. ಸೆ.27: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024ರ ಪ್ರಶಸ್ತಿ ನೀಡಿ ಗೌರವಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಈ ಎಲ್ಲಾ ಕೊಡುಗೆಗಳನ್ನು ಆಧರಿಸಿ, ಕಂದಾಯ ಇಲಾಖೆ ವತಿಯಿಂದ 2023-24ನೇ ಸಾಲಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















