Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಜಿಲ್ಲಾಧಿಕಾರಿ ವರ್ಗಾವಣೆ ?  ಕರ್ನಾಟಕ ರಾಜ್ಯ ರೈತ ಸಂಘ ಆಕ್ರೋಶ…!

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30 : ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ವರ್ಗಾವಣೆ ವದಂತಿ ಹಿನ್ನೆಲೆಯಲ್ಲಿ ಅವರ ವರ್ಗಾವಣೆಯನ್ನು ವಾಪಸ್ ಪಡೆದು ಅವರನ್ನು ಇನ್ನೂ ಒಂದು ವರ್ಷಗಳ ಕಾಲ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ದಿವ್ಯಪ್ರಭು ಜಿ.ಆರ್.ಜೆ. ಅವರು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಅಕ್ರಮ ಮರಳು ಮತ್ತು ಗಣಿ ಸಾಗಾಣಿಕೆಯ ವಿರುದ್ಧ ಕ್ರಮವಹಿಸಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಡಳಿತ ನಡೆಸಿದ್ದಾರೆ. ಜಿಲ್ಲೆಯ ಆರು ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಬೆಳೆ ವಿಮೆ ವಿಚಾರದಲ್ಲಿ ವಿಮಾ ಪ್ರತಿನಿಧಿಗಳನ್ನು ಜಿಲ್ಲಾಧಿಕಾರಿಗಳ ಸಭಾಂಗಣಕ್ಕೆ ಕರೆಸಿ, ರೈತರೊಂದಿಗೆ ಚರ್ಚಿಸಿ ವಿಮೆಯನ್ನು ತುರ್ತಾಗಿ ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕೆಂದು ಆದೇಶ ನೀಡಿರುತ್ತಾರೆ.

ಬೆಸ್ಕಾಂ ಇಲಾಖೆ ವಿದ್ಯುತ್ ಕಡಿತಗೊಳಿಸಿದಾಗ ಅಧಿಕಾರಿಗಳಿಗೆ ರೈತರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೃಷಿ ಪಂಪ್ ಸೆಟ್ ಮಾರ್ಗಗಳಿಗೆ ವಿದ್ಯುತ್ ನೀಡುವಂತೆ ಕ್ರಮವಹಿಸಿದ್ದಾರೆ.

ಈ ಎಲ್ಲಾ ಕಾರಣಗಳಿಂದ ಜಿಲ್ಲಾಧಿಕಾರಿಯವರನ್ನು ಇನ್ನು ಒಂದು ವರ್ಷ ವರ್ಗಾವಣೆ ಮಾಡಬಾರದೆಂದು ರೈತ ಸಂಘವು ಒತ್ತಾಯಿಸಿದೆ.

ಒಂದು ವೇಳೆ ಸರ್ಕಾರ ರಾಜಕೀಯ ಒತ್ತಡಗಳಿಗೆ ಮಣಿದು ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಮುಂದಾದರೆ ಮಹಿಳಾ ಸಂಘಟನೆಗಳು, ರೈತ ಸಂಘ ಮತ್ತು ಸಾರ್ವಜನಿಕರು ಹೋರಾಟವನ್ನು ಕೈಗೆತ್ತಿಕೊಂಡು ಜಿಲ್ಲೆಯಲ್ಲಿ ಉಗ್ರ ಹೋರಾಟವನ್ನು ಮಾಡುತ್ತೇವೆ. ಒಂದು ವೇಳೆ ಈ ಹೋರಾಟದಲ್ಲಿ ಏನಾದರೂ ಅಹಿತಕರ ಘಟನೆಗಳು ನಡೆದಲ್ಲಿ ಸರ್ಕಾರವೇ ಜವಾಬ್ದಾರಿಯೆಂದು ರೈತ ಸಂಘ ಪ್ರಕಟಣೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾ ಕಾರ್ಯಾಧ್ಯಕ್ಷ ಕೆ. ಸಿ. ಹೊರೆಕೆರಪ್ಪ, ಚಿತ್ರದುರ್ಗ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಧನಂಜಯ, ಚಳ್ಳಕೆರೆ ತಾಲೂಕು ರೈತ ಸಂಘದ ಅಧ್ಯಕ್ಷ ಟಿ. ಹಂಪಣ್ಣ, ಕಲ್ಲೇನಹಳ್ಳಿಯ ಯುವ ರೈತ ಕುಮಾರ,  ಜಿಲ್ಲಾ ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ, ಜಿಲ್ಲಾ ಮಹಿಳಾ ಸಂಚಾಲಕಿ ಸುಧಾ, ತಾಲೂಕು ಮಹಿಳಾ ಸಂಚಾಲಕಿ ಶಶಿಕಲಾ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...