ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.30 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧುಬಂಗಾರಪ್ಪನವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಆರ್.ಮಧುಕುಮಾರ್ ಇವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪಕ್ಷದ ಕಚೇರಿಯಲ್ಲಿ ನೇಮಕಾತಿ ಪತ್ರ ನೀಡಿದರು.
ಆರ್.ಮಧುಕುಮಾರ್‍ಗೆ ನೇಮಕಾತಿ ಪತ್ರ ನೀಡಿ ಮಾತನಾಡಿದ ಎಂ.ಕೆ.ತಾಜ್‍ಪೀರ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆಯುವುದು ಮುಖ್ಯವಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಸದ್ಯದಲ್ಲಿಯೇ ಲೋಕಸಭೆ ಚುನಾವಣೆ ಎದುರಾಗಲಿರುವುದರಿಂದ ಜಿಲ್ಲೆಯಾದ್ಯಂತ ಸಂಚರಿಸಿ ಹಿಂದುಳಿದ ವರ್ಗಗಳ ವಿಭಾಗವನ್ನು ಸಂಘಟಿಸಿ ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಕಿಸಾನ್‍ಸೆಲ್ ವಿಭಾಗದ ಉಪಾಧ್ಯಕ್ಷ ಶಿವಲಿಂಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









