ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 23 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿಗಳ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ಪಿಳ್ಳೆಕೆರನಹಳ್ಳಿ ಗ್ರಾಮದ ಎನ್.ರಾಮಪ್ಪ ಇವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಎಸ್ಸಿ. ವಿಭಾಗದ ಜಿಲ್ಲಾಧ್ಯಕ್ಷ ಎಸ್.ಜಯಣ್ಣ ಕಾಂಗ್ರೆಸ್ ಕಚೇರಿಯಲ್ಲಿ ಎನ್.ರಾಮಪ್ಪನವರಿಗೆ ನೇಮಕ ಪತ್ರ ವಿತರಿಸಿ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ದುರುಗೇಶ್, ಉಪಾಧ್ಯಕ್ಷ ಡಿ.ಕುಮಾರಸ್ವಾಮಿ ಕಾರ್ಯದರ್ಶಿ ಆರ್.ರಮೇಶ್, ಎಲ್.ಕೆ.ರಾಬರ್ಟ್, ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧಾ ಡಿ.ಎಸ್.ಹಳ್ಳಿ, ಕಾಂಗ್ರೆಸ್ ಉಪಾಧ್ಯಕ್ಷೆ ಭಾಗ್ಯಮ ಈ ಸಂದರ್ಭದಲ್ಲಿದ್ದರು.