ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.30 : ಪಂಜಾಬ್ ಶಾಸಕ ಮತ್ತು ರಾಷ್ಟ್ರೀಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುಕಪಾಲ್‍ಸಿಂಗ್ ಕೆಹೆರಾರವರನ್ನು ಬಂಧಿಸಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಿಸಾನ್ ವಿಭಾಗ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರಾಷ್ಟ್ರೀಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುಕಪಾಲ್‍ಸಿಂಗ್ ಕೆಹೆರಾ ರೈತರ ಪರವಾಗಿ ನಿರಂತರ ಹೋರಾಟ ಮಾಡಿಕೊಂಡು ಬರುತ್ತಿರುವುದರಿಂದ ಪಂಜಾಬ್‍ನಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದು, ಅಲ್ಲಿನ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸುತ್ತಿರುವುದರಿಂದ ವಿನಾ ಕಾರಣ ಪಂಜಾಬ್ ಸರ್ಕಾರ ಅವರನ್ನು ಬಂಧಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನೆ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಎಂಟೊಬತ್ತು ವರ್ಷಗಳ ಹಿಂದೆ ನಡೆದ ಪ್ರಕರಣವನ್ನು ಅಂದೆ ಸುಪ್ರಿಂಕೋರ್ಟ್ ಸ್ಕ್ವಾಷ್‍ಗೊಳಿಸಿದ್ದರು ಸಹ ಹಳೆ ಪ್ರಕರಣವನ್ನು ಕೆದಕಿ ಸುಕಪಾಲ್‍ಸಿಂಗ್ ಕೆಹೆರಾರವರನ್ನು ಬಂಧಿಸಿರುವುದು ಅತ್ಯಂತ ಖಂಡನೀಯ. ಕೂಡಲೆ ಬಿಡುಗಡೆಗೊಳಿಸುವಂತೆ ಪಂಜಾಬ್ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಕಿಸಾನ್ ಸೆಲ್ ವಿಭಾಗದ ಜಿಲ್ಲಾಧ್ಯಕ್ಷ ಎ.ನಾಗರಾಜ, ಉಪಾಧ್ಯಕ್ಷ ಶಿವಲಿಂಗಪ್ಪ, ಕೆ.ಪಿ.ಸಿ.ಸಿ. ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ರಾಜಣ್ಣ, ಮಾಡನಾಯಕನಹಳ್ಳಿ ಸೋಮಶೇಖರ್, ಪ್ರಶಾಂತ್ ಚಿಕ್ಕಪ್ಪನಹಳ್ಳಿ, ಮೆದೇಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಆರ್.ಮಧುಕುಮಾರ್, ಉಪ್ಪಾರ ಸಮಾಜದ ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.