ಚಿತ್ರದುರ್ಗ : ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮೂಲವೇತನದ ಶೇ 2.75 ತುಟ್ಟಿಭತ್ಯೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜನವರಿ 1 ರಿಂದಲೇ ಅನ್ವಯವಾಗುವಂತೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕೇಂದ್ರದ ಮಾದರಿಯಲ್ಲಿ ಕರ್ನಾಟಕ ರಾಜ್ಯದ 540000 ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ಏಳನೇ ವೇತನ ಆಯೋಗ ರಚಿಸಿದ ಕೇಂದ್ರಕ್ಕೆ ಸಮಾನವಾದ ವೇತನ ನೀಡುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿಸುವಲ್ಲಿ ಶ್ರಮಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಹಾಗೂ ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಹಾಗೂ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ವತಿಯಿಂದ ಪ್ರಕಟಣೆಯ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.