ಚಿತ್ರದುರ್ಗ ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಾ.ನಾಗಲಕ್ಷ್ಮೀ ಚೌಧರಿ ಬೇಸರ

ಚಿತ್ರದುರ್ಗ, ಫೆಬ್ರವರಿ. 06 : ಜಿಲ್ಲಾಸ್ಪತ್ರೆಯ ಕಾರ್ಯವೈಖರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಬೇಸರ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಸ್ಪತ್ರೆಯ ಸ್ಥಿತಿಗತಿ ಅವಲೋಕನಕ್ಕಾಗಿ ಭೇಟಿ ನೀಡಿದಾಗ ಸಾಕಷ್ಟು ದೂರುಗಳು ಗಮನಕ್ಕೆ ಬಂದಿದ್ದು, ಜಿಲ್ಲಾಸ್ಪತ್ರೆಯ ವ್ಯವಸ್ಥೆಯು ಮನಸ್ಸಿಗೆ ನೋವುಂಟು ಮಾಡಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬಿಸಿ ನೀರು ಇಲ್ಲ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಳವಡಿಸಿರುವ ಲಿಪ್ಟ್ ವರ್ಕ್ ಆಗುತ್ತಿಲ್ಲ. ಜಿಲ್ಲಾಸ್ಪತ್ರೆಯಿಂದ ನಡೆಯುತ್ತಿರುವ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳು ಕಲ್ಪಿಸದೇ ಇರುವುದಕ್ಕೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನರ್ಸಿಂಗ್ ವಿದ್ಯಾರ್ಥಿಗಳನ್ನು ಸಭೆಗೆ ಕರೆಯಿಸಿದ ಆಯೋಗದ ಅಧ್ಯಕ್ಷರು, ಅವರಿಂದ ಅಹವಾಲುಗಳನ್ನು ಆಲಿಸಿದರು, ನರ್ಸಿಂಗ್ ಕಾಲೇಜಿಗೆ ಕೇವಲ 2 ಕೊಠಡಿ ಕೊಡಲಾಗಿದೆ, ಸೂಕ್ತ ಬೋಧಕರಿಂದ ಬೋಧನೆ ನಮಗೆ ದೊರೆಯುತ್ತಿಲ್ಲ, ಮೂಲಭೂತ ಸೌಕರ್ಯ ಸಿಗುತ್ತಿಲ್ಲ, ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು.  ಈ ಬಗ್ಗೆ ಖುದ್ದಾಗಿ ಭೇಟಿ ನೀಡಿ, ಸಮಸ್ಯೆ ಪರಿಹರಿಸುವುದಾಗಿ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಸಾಮಾಜಿಕ ಜಾಲತಾಣದ ದುಷ್ಪರಿಣಾಮಗಳ ಬಗ್ಗೆ ಎಚ್ಚರವಿರಲಿ : ಗ್ರಾಮೀಣ ಭಾಗದಿಂದ ನಗರ, ಪಟ್ಟಣಗಳಿಗೆ ಓದಲು ಬರುವ ಹೆಣ್ಣುಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿ, ಮೋಸದ ಬಲೆಗೆ ಬೀಳುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಹದಿಹರೆಯದ ಹೆಣ್ಣು ಮಕ್ಕಳು, ಸಾಮಾಜಿಕ ಜಾಲತಾಣದ ಬಳಕೆಯಲ್ಲಿ ಸಾಕಷ್ಟು ಎಚ್ಚರ ವಹಿಸಬೇಕು. ಆಸೆ, ಆಮಿಷಗಳಿಗೆ ಒಳಗಾಗಿ, ಮೋಸ ಹೋಗುವಂತಾಗಬಾರದು.  ಹೆಣ್ಣು ಮಕ್ಕಳು ತಮ್ಮ ಪೋಷಕರು, ಪಾಲಕರೊಂದಿಗೆ ನಿರಂತರ ಸಂಪರ್ಕವನ್ನು ಇಟ್ಟುಕೊಳ್ಳಬೇಕು.  ಯಾವುದೇ ಮೋಸ, ವಂಚನೆ ಅಥವಾ ಬೆದರಿಕೆಯಂತಹ ಪರಿಸ್ಥಿತಿ ಕಂಡುಬಂದಾಗ ಧೈರ್ಯವಾಗಿ ಎದುರಿಸಬೇಕು.  ಪೊಲೀಸ್ ಇಲಾಖೆ ಕೂಡ ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಡಾ. ನಾಗಲಕ್ಷ್ಮಿ ಅವರು ಹೇಳಿದರು.

ಮಹಿಳಾ ಆಯೋಗಕ್ಕೆ 2 ಸಾವಿರ ಅರ್ಜಿ ಸ್ವೀಕಾರ:
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಳೆದ ಒಂದು ವರ್ಷದ ಅವಧಿಯಲ್ಲಿ ಸುಮಾರು 2 ಸಾವಿರ ಅರ್ಜಿಗಳು ಆಯೋಗಕ್ಕೆ ಬಂದಿವೆ.   ಈ ಪೈಕಿ ಈಗಾಗಲೇ 1,700 ಕ್ಕೂ ಹೆಚ್ಚು ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದ್ದು, ಇನ್ನೂ 200 ಅರ್ಜಿಗಳು ಮಾತ್ರ ಬಾಕಿ ಇವೆ ಎಂದು ಹೇಳಿದರು.
ಮಕ್ಕಳ ರಕ್ಷಣೆ, ಭದ್ರತೆ, ಸ್ಥಿತಿಗತಿಗಳ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ವರದಿ ನೀಡಬೇಕು ಎಂದು ತಿಳಿಸಿದ ಅವರು, ಬಾಲ್ಯವಿವಾಹ ಹಾಗೂ ದೌರ್ಜನ್ಯ ತಡೆಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಪೊಲೀಸ್ ತುರ್ತು ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡುವಂತೆ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

suddionenews

Recent Posts

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

47 minutes ago

ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮ ಕಾರ್ಯ ನಿರ್ವಹಣೆ : ಬಿಸಿ ಸಂಜೀವ ಮೂರ್ತಿ ಮೆಚ್ಚುಗೆ

ಹಿರಿಯೂರು : ಜಿಲ್ಲೆಯಲ್ಲಿಯೇ ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಶಿಮುಲ್ ನಿರ್ದೇಶಕ ಬಿಸಿ…

2 hours ago

ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದ ಕಾಂಗ್ರೆಸ್ ಇಂದು ಜೈ ಭೀಮ್ ಎನ್ನುತ್ತಿದೆ : ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ

  ಸುದ್ದಿಒನ್ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ…

2 hours ago

ಚಿತ್ರದುರ್ಗಕ್ಕೆ ಆಗಮಿಸಿದ ಕರ್ನಾಟಕ ಶ್ರಮಿಕ್ ಸಮ್ಮಾನ್ ಯಾತ್ರೆ : ಫೆ.25 ರಂದು ನವದೆಹಲಿಯಲ್ಲಿ ಬೃಹತ್ ಸಮಾವೇಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಫೆಬ್ರವರಿ 08 ರಂದು ಶ್ರೀ ಜೋಳ ಸಿದ್ದಿವಿನಾಯಕ ದೇವಾಲಯ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 06 :…

3 hours ago

ಟಿಬಿ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಡಾ.ಕಾವ್ಯ

ಚಿತ್ರದುರ್ಗ. ಫೆ.06: ಎಲ್ಲರೂ ಕೈಜೋಡಿಸಿ ಟಿಬಿ ಮುಕ್ತ ಸಮಾಜ ನಿರ್ಮಾಣ ಮಾಡೋಣ ಎಂದು ಕಾಸವರಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ…

3 hours ago