Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಿಬ್ಬಂದಿ ಕೊರತೆ : ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಜಿಲ್ಲಾಧಿಕಾರಿ ಸೂಚನೆ

---Advertisement---

 

ಚಿತ್ರದುರ್ಗ. ಸೆ.11: ಜಿಲ್ಲಾಸ್ಪತ್ರೆಗೆ ಮಂಜೂರಾದ ಹುದ್ದೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅನುಗುಣವಾಗಿ ತಜ್ಞ ವೈದ್ಯರು, ಶುಶ್ರೂಷಕರು, ತಂತ್ರಜ್ಞರು, ಗ್ರೂಪ್-ಡಿ ನೌಕರರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಗೆ ಮಂಜೂರಾದ ಹುದ್ದೆಗಳು ಖಾಲಿ ಇದ್ದ ಸಂದರ್ಭದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

ಜಿಲ್ಲಾಸ್ಪತ್ರೆಯಲ್ಲಿ ಫಿಜಿಷಿಯನ್, ಹೃದ್ರೋಗ ತಜ್ಞರು, ಅರವಳಿಕೆ ತಜ್ಞರು, ನೆಫ್ರೋಲಜಿ, ನ್ಯೂರೋಲಜಿ ಅಂತಹ ತಜ್ಞ ವೈದ್ಯರ ಕೊರತೆ ಕಾಡಬಾರದು. ಆಸ್ಪತ್ರೆಯಲ್ಲಿ ಇಂಜಿನಿಯರ್ ಗ್ರೇಡ್ 2 ಹಾಗೂ ಗ್ರೇಡ್ -3 ಹಂತದ 6 ಹುದ್ದೆಗಳು ಖಾಲಿಯಿವೆ.  ಹೊರಗುತ್ತಿಗೆ ಅಥವಾ ಪ್ರಭಾರದಲ್ಲಿ ಈ ಹುದ್ದೆಗಳಿಗೆ ಭರ್ತಿ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.  ಜಿಲ್ಲಾಸ್ಪತ್ರೆಯ ದುರಸ್ಥಿ ಕಾಮಗಾರಿ ಪೂರ್ಣಗೊಂಡು ಎರಡು ವರ್ಷಗಳು ತುಂಬಿಲ್ಲ. ಆದರೂ ವಾರ್ಡ್ ಮೇಲ್ಛಾವಣಿ ಕುಸಿದು ಬಿದ್ದು ರೋಗಿಗಳಿಗೆ ತೊಂದರೆಯಾದ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಕಟ್ಟಡ ಕ್ಷಮತೆ, ಅಗತ್ಯ ಇರುವ ದುರಸ್ಥಿ ಕೆಲಸಗಳ ಕುರಿತು ಇಂಜಿನಿಯರ್ ಅವರ ವರದಿ ಇಲ್ಲದೇ ದುರಸ್ಥಿ ಕಾಮಗಾರಿ ನಡೆಸಲಾಗಿದೆಯೇ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ಪ್ರಶ್ನಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ, ನಿವಾಸಿ ವೈದ್ಯಾಧಿಕಾರಿ ಆನಂದ್ ಪ್ರಕಾಶ್, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಸಿ.ಓ.ಸುಧಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಡಾ.ಶೀತಲ್ ಪ್ರಶಾಂತ, ಚಿದಾನಂದ ಸ್ವಾಮಿ, ಹಬೀಬುಲ್ಲಾ, ನಾಗರಾಜ ಸಕ್ಕರೆ, ಎಂ.ಆರ್.ಸಿ. ಮೂರ್ತಿ, ರೆಹಮತ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now