Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಎರಡು ದಿನಗಳ ಜಿಲ್ಲಾ ಪ್ರವಾಸ

---Advertisement---

 

ಚಿತ್ರದುರ್ಗ. ಜೂ.27: ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಇದೇ ಜೂನ್ 28 ರಿಂದ 30 ರವರೆಗೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಜೂ.28ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿರುವ ಸರ್ಕಾರದ 2 ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸುವರು. ಬೆಳಿಗ್ಗೆ 11.15ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಿಕಾಭವನದಲ್ಲಿ ಚಿತ್ರದುರ್ಗ ಪತ್ರಿಕಾ ಭವನದ ನವೀಕೃತ ಹೈಟೆಕ್ ಸಭಾಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12ಕ್ಕೆ ಹಿರಿಯೂರು ನಗರದ ಗಾಂಧಿ ಸರ್ಕಲ್‍ನಿಂದ ರಂಜಿತಾ ಹೋಟೆಲ್‍ವರೆಗೆ ಮುಖ್ಯರಸ್ತೆ ಮರು ಡಾಂಬರಿಕರಣಕ್ಕೆ ಚಾಲನೆ, ಮಧ್ಯಾಹ್ನ 12.30ಕ್ಕೆ ಹಿರಿಯೂರು ತುಳಸಿ ಕಲ್ಯಾಣ ಮಂಟಪದಲ್ಲಿ ಡಾ.ಬಾಬು ಜಗಜೀವನರಾಂ ಯುವಕ ಸಂಘ ಉದ್ಘಾಟನೆ ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ, ಮಧ್ಯಾಹ್ನ 2.30ಕ್ಕೆ ಹಿರಿಯೂರು ನಗರಸಭೆ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಫಲಾನುಭವಿಗಳಿಗೆ ವಿಶೇಷ ಆರ್ಥಿಕ ನೆರವು, ಗಣಕಯಂತ್ರ ವಿತರಣೆ ಹಾಗೂ ಮಿನಿ ಟಿಪ್ಪರ್ ವಾಹನದ ಚಾಲನೆ, ಸಂಜೆ 5.30ಕ್ಕೆ ಹಿರಿಯೂರು ನೆಹರು ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದ್ವಿತೀಯ ಪಿಯಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಮಕ್ಕಳ ಜಾನಪದ ಸಾಂಸ್ಕøತಿಕ ಹಬ್ಬದಲ್ಲಿ ಭಾಗವಹಿಸಿ, ಚಳ್ಳಕೆರೆಯಲ್ಲಿ ವಾಸ್ತವ್ಯ ಮಾಡುವರು.

ಜೂನ್ 29ರಂದು ಬೆಳಿಗ್ಗೆ 10.30ಕ್ಕೆ ಯರಬಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅರಿವು ಸೇವಾ ಟ್ರಸ್ಟ್ ಇವರ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಕಾರದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ, ಬೆಳಿಗ್ಗೆ 11ಕ್ಕೆ ಹಿರಿಯೂರು ಮೋಕ್ಷಗುಂಡುಂ ವಿಶ್ವೇಶ್ವರಯ್ಯ ವಿದ್ಯಾಲಯದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವೀರಶೈವ ಲಿಂಗಾಯತ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ 2024-25ನೇ ಸಾಲಿನಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ, ಮಧ್ಯಾಹ್ನ 12ಕ್ಕೆ ಹಿರಿಯೂರು ರೋಟರಿ ಸಭಾ ಭವನದಲ್ಲಿ ಹಿರಿಯೂರು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ  ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ, ಮಧ್ಯಾಹ್ನ 1ಕ್ಕೆ ಹಿರಿಯೂರು ವಾಸವಿ ಕಲ್ಯಾಣ ಮಂಟಪದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ  ಪುರಸ್ಕಾರ ಹಾಗೂ ಗನ್ನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚಳ್ಳಕೆರೆಯಲ್ಲಿ ವಾಸ್ತವ್ಯ ಮಾಡುವರು.

ಜೂನ್ 30ರಂದು ಬೆಳಿಗ್ಗೆ 11.30ಕ್ಕೆ ಚಿತ್ರದುರ್ಗ ಡಿಸಿಸಿ ಬ್ಯಾಂಕ್‍ನಲ್ಲಿ ಬೋರ್ಡ್  ಮೀಟಿಂಗ್, ಮಧ್ಯಾಹ್ನ 3ಕ್ಕೆ ಬಂಡ್ಲೋರಹಟ್ಟಿ ಗ್ರಾಮದಲ್ಲಿ ಐಮಂಗಲದಿಂದ ಬಂಡ್ಲೋರಹಟ್ಟಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಮಧ್ಯಾಹ್ನ 4ಕ್ಕೆ ಮಸ್ಕಲ್ ಗ್ರಾಮದಲ್ಲಿ ಮಸ್ಕಲ್ ಗ್ರಾಮದಿಂದ ಹೊಸಯಳನಾಡು ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಸಂಜೆ 5ಕ್ಕೆ ಧರ್ಮಪುರ ಗ್ರಾಮದಲ್ಲಿ ಧರ್ಮಪುರದಿಂದ ಬೆನಕನಹಳ್ಳಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...