ಚಿತ್ರದುರ್ಗ (ಮಾ.06): ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಪೂರ್ಣಾವಧಿ ಲೀಗಲ್‍ಯೇಡ್ ಕೌನ್ಸಿಲ್ ಎಂಗೇಜ್‍ಮೆಂಟ್ ಸಿಸ್ಟಮ್ (ಎಲ್.ಎ.ಡಿ.ಸಿ.ಎಸ್) ಅನ್ನು ಹೊಸದಾಗಿ ಸ್ಥಾಪನೆ ಮಾಡುತ್ತಿರುವುದರಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ,
ಡೆಪ್ಯುಟಿ ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆ ಹಾಗೂ
ಅಸಿಸ್ಟೆಂಟ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್-01 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,
ಇಚ್ಛೆಯುಳ್ಳವರು ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾ. 10 ರಂದು ಸಂಜೆ 05 ಗಂಟೆಯೊಳಗಾಗಿ ಸಲ್ಲಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಿರೀಶ್ ಬಿ.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





GIPHY App Key not set. Please check settings