Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

---Advertisement---

 

ಚಿತ್ರದುರ್ಗ .04: 2026-27ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ 33 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ್ನು ಇದೇ ಸೆ.05ರಂದು ಬೆಳಿಗ್ಗೆ 9.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ನಡೆಯುವ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.

ಪ್ರಾಥಮಿಕ-ಕಿರಿಯ ವಿಭಾಗ-6,                              ಪ್ರಾಥಮಿಕ ಹಿರಿಯ ವಿಭಾಗ-6,                          ಪ್ರೌಢಶಾಲಾ ವಿಭಾಗ-6 ,                                    ಪ್ರಾಥಮಿಕ-ಕಿರಿಯ ವಿಭಾಗ ವಿಶೇಷ ಪ್ರಶಸ್ತಿ-1,      ಪ್ರಾಥಮಿಕ-ಹಿರಿಯ ವಿಭಾಗ ವಿಶೇಷ ಶಿಕ್ಷಕ ಪ್ರಶಸ್ತಿ-7, ಪ್ರೌಢಶಾಲಾ ವಿಭಾಗ ವಿಶೇಷ ಶಿಕ್ಷಕ ಪ್ರಶಸ್ತಿ-7 ಸೇರಿದಂತೆ ಒಟ್ಟು 33 ಮಂದಿ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ವಿವರ ಇಂತಿದೆ.

ಪ್ರಾಥಮಿಕ-ಕಿರಿಯ ವಿಭಾಗ:                                 ಚಳ್ಳಕೆರೆ ತಾಲ್ಲೂಕು ಯಲಗಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಿ.ಚಂದ್ರಣ್ಣ,

ಚಿತ್ರದುರ್ಗ ತಾಲ್ಲೂಕು ಚಿಕ್ಕಾಲಘಟ್ಟ ಹೊಸ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಡಿ.ಮಾದಪ್ಪ,

ಹೊಳಲ್ಕೆರೆ ತಾಲ್ಲೂಕು ಗುಂಡೇರಿ ಉರ್ದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ರೆಹಮತ್ ಉನ್ನೀಸಾ,

ಹೊಸದುರ್ಗ ತಾಲ್ಲೂಕು ದಳವಾಯಿಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಎ.ಎಸ್.ಗೀತಮ್ಮ,

ಮೊಳಕಾಲ್ಮುರು ತಾಲ್ಲೂಕು ಬಸವೇಶ್ವರ ನಗರ (ಗೌ) ಸಹ ಶಿಕ್ಷಕ ಎ.ನೇಮಕಲ್ಲಪ್ಪ ಅವರು ಉತ್ತಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ-ಹಿರಿಯ ವಿಭಾಗ:                                ಚಳ್ಳಕೆರೆ ತಾಲ್ಲೂಕು ರಂಗವ್ವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಿ.ವಿಜಯಲಕ್ಷ್ಮಿ,

ಚಿತ್ರದುರ್ಗ ತಾಲ್ಲೂಕು ಯಳಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಿ.ಎನ್.ಮಹೇಶ್,

ಹೊಳಲ್ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಎಂ.ವಿ.ನಾಗಶಿಲ್ಪ,

ಹೊಸದುರ್ಗ ಜಿ.ಎನ್.ಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಆರ್.ಗೋಪಾಲಪ್ಪ,

ಹಿರಿಯೂರು ಕೆಇಬಿ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕಿ ಎಚ್.ಲೋಕಮ್ಮ,

ಮೊಳಕಾಲ್ಮುರು ತಾಲ್ಲೂಕಿನ ರಾಜಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಬುಳ್ಳಪ್ಪ ಅವರು ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗ:

ಚಿತ್ರದುರ್ಗ ತಾಲ್ಲೂಕು ಯಳಗೋಡು ಸರ್ಕಾರಿಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಸಹ ಶಿಕ್ಷಕ ಹೆಚ್.ಬಿ.ಗೋವಿಂದರಾಜು,

ಚಿತ್ರದುರ್ಗ ತಾಲ್ಲೂಕು ಕಡಬನಕಟ್ಟೆ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಭೀಮಪ್ಪ ಮಾದರ,

ಚಳ್ಳಕೆರೆ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆ ಕಲಾ ವಿಭಾಗದ ಸಹ ಶಿಕ್ಷಕಿ ಡಿ.ಪ್ರಮಿಳಮ್ಮ,

ಹೊಳಲ್ಕೆರೆ ತಾಲ್ಲೂಕು ಶಿವಪುರ ಶ್ರೀ ನುಲಿಯ ಚಂದಯ್ಯ ಪ್ರೌಢಶಾಲೆ ಗಣಿತ ಸಹ ಶಿಕ್ಷಕ ಸಿ.ಎನ್.ಮೃತ್ಯುಂಜಯಪ್ಪ,

ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ಆಂಗ್ಲಭಾಷೆ ಶಿಕ್ಷಕ ಆರ್.ವೆಂಕಟೇಶ,

ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಕೆಪಿಎಸ್ ಶಾಲೆಯ ವಿಜ್ಞಾನ ಸಹ ಶಿಕ್ಷಕಿ ಸಿ.ರೂಪ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ-ಕಿರಿಯ ವಿಭಾಗದ ಜಿಲ್ಲಾಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಹಿರಿಯೂರು ತಾಲ್ಲೂಕು ಬೆನಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಸ್.ಶಶಿಧರ್ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ-ಹಿರಿಯ ವಿಭಾಗದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಚಳ್ಳಕರೆ ತಾಲ್ಲೂಕು ಹೆಗ್ಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಆರ್.ಪ್ರಸನ್ನ,

ಚಿತ್ರದುರ್ಗ ತಾಲ್ಲೂಕು ಉಪ್ಪನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಿ.ಇಂದಿರಾ,

ಹೊಸದುರ್ಗ ತಾಲ್ಲೂಕು ಮರಬಗಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಚ್.ಸಿ.ಯೋಗರಾಜ,

ಹಿರಿಯೂರು ತಾಲ್ಲೂಕು ಹರಿಯಬ್ಬೆ ಕೆಪಿಎಸ್ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಂ.ಮಂಜುನಾಥ,

ಮೊಳಕಾಲ್ಮುರು ಶ್ರೀ ಯರಮಂಚನಾಯಕ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಾಕೀರ್ ಹುಸೇನ್,

ಚಿತ್ರದುರ್ಗ ವಿ.ಪಿ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಎ.ಎನ್.ಸುರೇಶ್,

ಚಳ್ಳಕೆರೆ ತಾಲ್ಲೂಕು ದುರ್ಗಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಎಂ.ಜಿ.ಮಂಜುನಾಥ ವಿಶೇಷ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಚಿತ್ರದುರ್ಗ ತಾಲ್ಲೂಕು ಚೌಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ಗಣಿತ ಸಹ ಶಿಕ್ಷಕರಾದ ಬಿ ಅರುಣ,

ಚಳ್ಳಕೆರೆ ತಾಲ್ಲೂಕು ಟಿ.ಎನ್.ಕೋಟೆ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗದ) ಆಂಗ್ಲಭಾಷೆ ಸಹ ಶಿಕ್ಷಕ ಎಸ್.ಮಂಜುನಾಥ,

ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಕೆಪಿಎಸ್ ಪ್ರೌಢಶಾಲೆ ಗಣಿತ ಸಹ ಶಿಕ್ಷಕಿ ಸಿ.ಡಿ.ವಾಣಿ,

ಚಿತ್ರದುರ್ಗ ತಾಲ್ಲೂಕು ಗುಡ್ಡದರಂಗವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಓ.ಕವಿತಾ,

ಹೊಳಲ್ಕೆರೆ ತಾಲ್ಲೂಕು ದುಮ್ಮಿ ಅರುಣೋದಯ ಪ್ರೌಢಶಾಲೆ ವೃತ್ತಿ ಶಿಕ್ಷಣ ಶಿಕ್ಷಕಿ ಕೆಪಿಎಂ ಉಷಾದೇವಿ,

ಹೊಳಲ್ಕೆರೆ ತಾಲ್ಲೂಕು ತೇಕಲವಟ್ಟಿ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಎಚ್.ರವಿಕುಮಾರ್,

ಮೊಳಕಾಲ್ಮುರು ತಾಲ್ಲೂಕು ಬಾಂಡ್ರಾವಿ ಸರ್ಕಾರಿ ಪ್ರೌಢಶಾಲೆ ಗಣಿತ ಸಹ ಶಿಕ್ಷಕ ಯು.ಬಸವರಾಜ ಅವರು ಜಿಲ್ಲಾಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ..ಆರ್.ಮಂಜುನಾಥ ತಿಳಿಸಿದ್ದಾರೆ.

 

ಸೆ.05ರಂದು ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ :

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ-2026 ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಬೆಳಿಗ್ಗೆ 9.30ಕ್ಕೆ ಆಯೋಜಿಸಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಸ್.ರಮ್ಯ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಪ್ರಾಂಶುಪಾಲರು ಹಾಗೂ ಪದನಿಮಿತ್ತ ಸಹ ನಿರ್ದೇಶಕ ಸಿಟಿಇ ವೈ.ಸಿ.ರವಿಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮಾರುತೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಹಂತೇಶ್, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ಶಿವಣ್ಣ, ತಾಲ್ಲೂಕು ಅಧ್ಯಕ್ಷರಾದ ಎಂ.ನಿಜಲಿಂಗಪ್ಪ, ಪಿ.ಜೆ.ಗುರುನಾಥಪ್ಪ ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದ್ದಾರೆ.
==========

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now