ಚಿತ್ರದುರ್ಗ. ಜ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ 2026ರ ಫೆಬ್ರವರಿ 1ರಂದು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ “ಜಿಲ್ಲಾ ಮಟ್ಟದ ಉದ್ಯೋಗ ಮೇಳ” ಹಮ್ಮಿಕೊಳ್ಳಲಾಗಿದೆ.
ಈ ಮೇಳದಲ್ಲಿ ರಾಜ್ಯದ ಹಲವಾರು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮಾ, ಬಿ.ಇ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. 18 ರಿಂದ 35 ವರ್ಷದೊಳಗಿನ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಹಾಜರಾಗಬಹುದಾಗಿದೆ.
ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳ ನೊಂದಣಿ ಕಡ್ಡಾಯವಾಗಿದೆ. ಅಭ್ಯಥಿಗಳು ಕನಿಷ್ಠ 05 ಬಯೋಡೇಟಾ ಪ್ರತಿಗಳು ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಅನ್ನು ಕಡ್ಡಾಯವಾಗಿ ತರಬೇಕು. ಈ ಉದ್ಯೋಗ ಮೇಳವು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳು ಕ್ಯೂಆರ್ ಕೋಡ್ ಮೂಲಕ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್‍ನ ಎನ್‍ಆರ್‍ಎಲ್‍ಎಂ ಘಟಕ ಅಥವಾ ಜಿಲ್ಲೆ ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಪಂಚಾಯತ್ ಎನ್‍ಆರ್‍ಎಲ್‍ಎಂ ವಿಭಾಗ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.






