Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟ: ಗುಂಡು ಎಸೆತದಲ್ಲಿ ವರವು ಶಾಲೆಯ ದೀಪಾ ರಾಜ್ಯಮಟ್ಟಕ್ಕೆ ಆಯ್ಕೆ

---Advertisement---

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ 14 ವರ್ಷದೊಳಗಿನವರ ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಚಳ್ಳಕೆರೆ ತಾಲೂಕಿನ ವರವು ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ದೀಪಾ ಡಿ. ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗ್ರಾಮೀಣ ಭಾಗದ ಪ್ರತಿಭೆಯಾಗಿರುವ ದೀಪಾ ಅವರ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು SDMC ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲೂ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now