ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೆ ತರಗತಿ ಬಾಲಕಿ ಬಿಂಧು ಟಿ. 400 ಮೀಟರ್, ಎಂಟು ನೂರು ಮೀಟರ್ ಓಟ ಹಾಗೂ 400 ಮೀಟರ್ ಅಡೆತಡೆ ಓಟದಲ್ಲಿ ಭಾಗವಹಿಸಿ ಜಯಶಾಲಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷರಾದ ಸತ್ಯನಾರಾಯಣಶೆಟ್ರು, ಕಾರ್ಯದರ್ಶಿ ಅಜಯ್‍ಕುಮಾರ್ ಎಲ್.ಎನ್. ಹಾಗೂ ಮುಖ್ಯೊಪಾಧ್ಯಾಯರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಬಿಂಧು ಟಿ. ಇವರಿಗೆ ಅಭಿನಂದಿಸಿದ್ದಾರೆ.










