ಚಿತ್ರದುರ್ಗ‌ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಯಾವಾಗ, ಎಲ್ಲಿ ? ಇಲ್ಲಿದೆ ಸಂಪೂರ್ಣ ಮಾಹಿತಿ…!

1 Min Read

 

 

ಚಿತ್ರದುರ್ಗ,(ಫೆ.15) :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನ ಚಿತ್ರದುರ್ಗ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಇದೇ ಫೆಬ್ರವರಿ 20 ಮತ್ತು 21 ರಂದು ಬೆಳಿಗ್ಗೆ 10 ಗಂಟೆಯಿಂದ ಚಿತ್ರದುರ್ಗ ನಗರದ ವೀರವನಿತೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಈಜು, ಗುಂಪು ಆಟಗಳು, ಕರಕುಶಲ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಇತ್ಯಾದಿ ಸ್ಪರ್ಧೆಗಳನ್ನು ಮಹಿಳೆ ಮತ್ತು ಪುರುಷ ನೌಕರರಿಗೆ ಪ್ರತ್ಯೇಕವಾಗಿ ಏರ್ಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08194 – 235635 ಗೆ ಸಂಪರ್ಕಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *