Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಮಾಡದಕೆರೆಯಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

ಚಿತ್ರದುರ್ಗ,(ಜುಲೈ 8) : ಜಿಲ್ಲೆಯಲ್ಲಿ ಜುಲೈ 7ರಂದು ಸುರಿದ ಮಳೆ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 18.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 5.2 ಮಿ.ಮೀ, ಬಾಗೂರು 13.2 ಮಿ.ಮೀ, ಮತ್ತೋಡು 2.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆಯಲ್ಲಿ 7.2 ಮಿ.ಮೀ,  ಬಿ.ದುರ್ಗ 16.4 ಮಿ.ಮೀ, ಚಿಕ್ಕಜಾಜೂರು 6.2 ಮಿ.ಮೀ, 4 ಹೆಚ್.ಡಿ.ಪುರ 8.4 ಮಿ.ಮೀ, ರಾಮಗಿರಿ 4.2 ಮಿ.ಮೀ, ತಾಳ್ಯ 4.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 4 ಮಿ.ಮೀ, ಚಿತ್ರದುರ್ಗ -2ರಲ್ಲಿ 1.2 ಮಿ.ಮೀ, ಐನಳ್ಳಿ 2.8 ಮಿ.ಮೀ, ಭರಮಸಾಗರ 10.3 ಮಿ.ಮೀ, ಸಿರಿಗೆರೆ 13.6 ಮಿ.ಮೀ, ಹಿರೇಗುಂಟನೂರು 1 ಮಿ.ಮೀ, ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ  ಇಕ್ಕನೂರಿನಲ್ಲಿ 3.2 ಮಿ,ಮೀ. ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಪರಶುರಾಮಪುರ 4 ಮಿ.ಮೀ, ನಾಯಕನಹಟ್ಟಿ 2.2 ಮಿ.ಮೀ, ಡಿ.ಮರಿಕುಂಟೆ 2.2 ಮಿ.ಮೀ, ಮಳೆಯಾಗಿದೆ. ಮೊಳಕಾಲ್ಮೂರಿನ ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 3.6 ಮಿ.ಮೀ, ರಾಮಪುರ 2 ಮಿ.ಮೀ,  ರಾಯಪುರ 2.1 ಮಿ.ಮೀ, ದೇವಸಮುದ್ರ 11 ಮಿ.ಮೀ, ಬಿ.ಜಿ.ಕೆರೆ 1.6 ಮಿ.ಮೀ ಮಳೆಯಾಗಿದೆ.

ಗುರುವಾರ ಸುರಿದ ಮಳೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಒಟ್ಟು-08 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಚಿತ್ರದುರ್ಗದಲ್ಲಿ-04 ಮನೆಗಳು, ಹೊಳಲ್ಕೆರೆಯಲ್ಲಿ-04 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಸಣ್ಣ ಜಾನುವಾರು, ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಹಾನಿ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!