ಚಿತ್ರದುರ್ಗ. ಜೂನ್.07: ಗುರುವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಯಾಪುರದಲ್ಲಿ 80 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 49 ಮಿ.ಮೀ, ಬಿಜಿಕೆರೆ 32.4 ಮಿ.ಮೀ, ರಾಂಪುರ 62.2 ಮಿ.ಮೀ, ದೇವಸಮುದ್ರ 50.2 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 9.4ಮಿ.ಮೀ, ಚಿತ್ರದುರ್ಗ-2ರಲ್ಲಿ 11.5ಮಿ.ಮೀ, ತುರುವನೂರು 73.4ಮಿ.ಮೀ, ಭರಮಸಾಗರ 6.4ಮಿ.ಮೀ, ಹಿರೇಗುಂಟನೂರು 2.1ಮಿ.ಮೀ, ಐನಹಳ್ಳಿ 12.6ಮಿ.ಮೀ, ಸಿರಿಗೆರೆ 7.4 ಮಿ.ಮೀ, ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 10.6ಮಿ.ಮೀ, ಸುಗೂರು 26.2ಮಿ.ಮೀ, ಬಾಬ್ಬೂರು 10.2 ಮಿ.ಮೀ, ಈಶ್ವರಗೆರೆ 46.8ಮಿ.ಮೀ, ಇಕ್ಕನೂರು 28.2 ಮಿ.ಮೀ, ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 24.6ಮಿ.ಮೀ, ಮತ್ತೋಡು 18.4ಮಿ.ಮೀ, ಶ್ರೀರಾಂಪುರ 5 ಮಿ.ಮೀ, ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 3.2 ಮಿ.ಮೀ, ಚಿಕ್ಕಜಾಜೂರು 5.4 ಮಿ.ಮೀ, ಬಿ. ದುರ್ಗ 5.2 ಮಿ.ಮೀ, ಹೆಚ್‍ಡಿ ಪುರ 4.2 ಮಿ.ಮೀ, ತಾಳ್ಯ 3.2 ಮಿ.ಮೀ, ರಾಮಗಿರಿ 3.4 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 23.2ಮಿ.ಮೀ, ಪರುಶುರಾಂಪುರ 41.2ಮಿ.ಮೀ, ನಾಯಕನಹಟ್ಟಿ 77.4ಮಿ.ಮೀ, ತಳಕು 34.4ಮಿ.ಮೀ, ಡಿ. ಮರಿಕುಂಟೆ 13.6 ಮಿ.ಮೀ ಮಳೆಯಾಗಿದೆ.
ಜಿಲ್ಲೆಯಾದ್ಯಂತ 32 ಮನೆಗಳು ಭಾಗಶಃ ಹಾನಿ: ಗುರುವಾರ ಸುರಿದ ಮಳೆಗೆ ಜಿಲ್ಲಾಯಾದ್ಯಂತ ಒಟ್ಟು 32 ಮನೆಗಳು ಭಾಗಶಃ ಹಾನಿಯಾಗಿವೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ಭಾಗಶಃ 11 ಮನೆಗಳು ಹಾನಿಯಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಭಾಗಶಃ 5 ಮನೆಗಳು ಹಾಗೂ 2 ಹೆಕ್ಟೆರ್ ತೋಟಗಾರಿಕೆ ಬೆಳೆ ಕೂಡ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 1 ಮನೆ ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 9 ಸಣ್ಣ ಜಾನುವಾರು ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭಾಗಶಃ 16 ಮನೆಗಳು ಹಾಗೂ 4 ಸಣ್ಣ ಜಾನುವಾರು, 1 ದೊಡ್ಡ ಜಾನುವಾರು ಹಾನಿಯಾಗಿದ್ದು, 19 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್…