ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ ವತಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾಪುರಸ್ಕಾರ ನೀಡಲು ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ನಮ್ಮ ಸಮುದಾಯದ ಮಕ್ಕಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 85% ಅಂಕಪಡೆದವರಿಗೆ, ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ 85% ಅಂಕ ಪಡೆದವರಿಗೆ ಪ್ರತಿಭಾಪುರಸ್ಕಾರ ನೀಡಲಾಗುವುದು. ವಿದ್ಯಾರ್ಥಿಗಳು ಅರ್ಜಿಯೊಂದಿಗೆ ದೃಢೀಕರಿಸಿದ ಅಂಕಪಟ್ಟಿ, ಆಧಾರ್‌ಕಾರ್ಡ್, ಟಿ.ಸಿ., ಬ್ಯಾಂಕ್ ಪಾಸ್‌ಪುಸ್ತಕ, ಮತ್ತು ಇತ್ತೀಚಿನ ಭಾವಚಿತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯಲ್ಲಿರುವ ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘದ ಕಛೇರಿಗೆ ದಿ:09-07-2026 ರಿಂದ 30-09-2026 ಸಲ್ಲಿಸಲು ಈ ಮೂಲಕ ಕಾರ್ಯದರ್ಶಿಗಳಾದ ಜೆ.ಪರಶುರಾಮ ಮತ್ತು ಶ್ರೀಮತಿ ಡಿ.ಕೆ.ಶೀಲಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








