Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಯಾದವ ಗೊಲ್ಲರ ಸಂಘ: ಚುನಾವಣಾ ವೇಳಾಪಟ್ಟಿ ಪ್ರಕಟ

---Advertisement---

 

ಚಿತ್ರದುರ್ಗ. ಏ.30: ನಗರದ ರಂಗಯ್ಯನಬಾಗಿಲು ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೇ 17ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘದ ಚುನಾವಣಾಧಿಕಾರಿಗಳು ಹಾಗೂ ಚಿತ್ರದುರ್ಗ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ತಿಳಿಸಿದ್ದಾರೆ.

 

ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘ ಇದರ ಬೈಲಾ ಸಂಖ್ಯೆ 37(ಸಿ) ಪ್ರಕಾರ ಸಂಘದ ಆಡಳಿತ ಮಂಡಳಿಗೆ 15 ಜನ ಸದಸ್ಯರುಗಳ ಸ್ಥಾನಗಳಿಗೆ ಮೇ 17 ರಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಚುನಾವಣೆಗೆ ಸಂಬಂಧಿಸಿದಂತೆ ಸಂಘದ ಬೈಲಾ ಪ್ರಕಾರ 15 ಸ್ಥಾನಗಳಿಗೆ ಚುನಾವಣೆ ಮೇ 17ರಂದು ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ನಡೆಸಲಾಗುವುದು. ಚುನಾವಣೆಯ ಉಳಿದ ಪ್ರಕ್ರಿಯೆಗಳನ್ನು ಚುನಾವಣಾಧಿಕಾರಿಗಳ ಕಾರ್ಯಾಲಯ, ತಾಲ್ಲೂಕು ಕಚೇರಿ ಸಭಾಂಗಣ, ಚಿತ್ರದುರ್ಗ ಇಲ್ಲಿ ಜರುಗಿಸಲಾಗುವುದು.

ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಮೇ 2 ರಿಂದ ಮೇ 8 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗ ತಾಲ್ಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ಮೇ 9 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಪರಿಶೀಲನೆ ನಂತರ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯನ್ನು ಚಿತ್ರದುUರ್ಗ ತಾಲ್ಲೂಕು ಕಚೇರಿ ಹಾಗೂ ಸಂಘದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಮೇ 11ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ. ಅಂದೇ ಮಧ್ಯಾಹ್ನ 3 ಗಂಟೆಯ ನಂತರ ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡಿ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಮೇ.13ರಂದು ಸಂಜೆ 4ಕ್ಕೆ ಮಾದರಿ ಮತಪತ್ರದ ನಮೂನೆ ಪ್ರಕಟಣೆ ಮಾಡಲಾಗುವುದು.

 

ಮೇ 17ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಚಿತ್ರದುರ್ಗ ನಗರಸಭೆ ಮುಂಭಾಗದ ಬಿ.ಡಿ. ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆ ಮುಗಿದ ತಕ್ಷಣ ಅಂದೇ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸಲಾಗುವುದು.

ಸ್ಪರ್ಧಿಸುವ ಅಭ್ಯರ್ಥಿಗಳು ಸಂಘದ ಬೈಲಾ ಪ್ರಕಾರ ಅರ್ಹತೆಗಳನ್ನು ಹೊಂದಿರಬೇಕು ಹಾಗೂ 2,000 ರೂ.ಗಳ ಚುನಾವಣಾ ಠೇವಣಿಯನ್ನು ಸಂಘದ ಕಛೇರಿಯಲ್ಲಿ ಪಾವತಿಸಿ ಚಲನ್ ಪಡೆಯಬೇಕು. 2026ರ ಏಪ್ರಿಲ್ 26 ಅಂತ್ಯಕ್ಕೆ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಮಾತ್ರ ಮತದಾನ ಮಾಡಲು ಮತ್ತು ಸ್ಪರ್ಧಿಸಲು ಅರ್ಹರಾಗಿರುತ್ತಾರೆ.  ಮತದಾನದ ಸಮಯದಲ್ಲಿ ಸಂಘವು ನೀಡಿದ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ರಂಗಯ್ಯನಬಾಗಿಲು ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘದ ಚುನಾವಣಾಧಿಕಾರಿಗಳು ಹಾಗೂ ಚಿತ್ರದುರ್ಗ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...