ಚಿತ್ರದುರ್ಗ. ನ. 27 : ರೋಗಿಗಳು ಹಾಗೂ ಅವರ ಸಂಬಂಧಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಯಾವುದೇ ಕಾರಣಕ್ಕೂ ವೈದ್ಯಕೀಯ ಸಿಬ್ಬಂದಿ ಹಾಗೂ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು ಜಿಲ್ಲಾ ಶಸ್ತçಚಿಕಿತ್ಸಕ ಎಸ್.ಪಿ.ರವೀದ್ರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ರೋಗಿಗಳು ಯಾರಿಗೂ ಹಣ ನೀಡಿ ಪ್ರೋತ್ಸಾಹಿಸಬಾರದು. ಆಸ್ಪತ್ರೆಯಲ್ಲಿ ಯಾರಾದರೂ ಹಣ ಕೇಳಿದಲ್ಲಿ ಕೂಡಲೇ ಜಿಲ್ಲಾ ಶಸ್ತçಚಿಕಿತ್ಸಕರ ಗಮನಕ್ಕೆ ತರಬೇಕು. ರೋಗಿಗಳು ಆಸ್ಪತ್ರೆಗೆ ಬರುವಾಗ ತಪ್ಪದೇ ಆಧಾರ್ ಕಾರ್ಡ್ ಮತ್ತು ರೇಷನ್ ತರಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ದಾಖಲಾದ ಎಲ್ಲಾ ರೋಗಿಗಳಲ್ಲಿ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಆಸ್ಪತ್ರೆಯಲ್ಲಿ ದಾಖಲಾದಾಗ ರೋಗಿಯವರನ್ನು ನೋಡಲು ನಿಗದಿತ ಸಮಯದಲ್ಲಿ ಮಾತ್ರ ಸಾರ್ವಜನಿಕರು ಆಸ್ಪತ್ರೆ ಭೇಟಿ ಮಾಡಬೇಕು. ಆಸ್ಪತ್ರೆಯ ಆವರಣವನ್ನು ಸ್ವಚ್ಛವಾಗಿರಿಸಲು ಸಹಕರಿಸಬೇಕು. ಜಿಲ್ಲಾ ಆಸ್ಪತ್ರೆಯ ಬಗ್ಗೆ ಯಾವುದೇ ದೂರುಗಳು ಇದ್ದಲ್ಲಿ ಮೊಬೈಲ್ ಸಂಖ್ಯೆ 9449843163 ಕೆರೆ ಮಾಡುವಂತೆ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















