Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 06 : ಮುನ್ಸಿಪಲ್ ಕಾಂಪ್ಲೆಕ್ಸ್‍ನಲ್ಲಿರುವ ಜಿಲ್ಲಾ ಪೌರ ಕಾರ್ಮಿಕರ ಸೇವಾ ಸಂಘದಲ್ಲಿ ಶನಿವಾರ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಪರಿನಿರ್ವಾಣ ದಿನವನ್ನು ಆಚರಿಸಿ ನಂತರ ನಗರಸಭೆ ಮುಂಭಾಗವಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಉಪಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಡಾ.ಬಿ.ಆರ್.ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ದಲಿತರು, ಶೋಷಿತರು, ತುಳಿತಕ್ಕೊಳಗಾದವರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಜಾತಿ ಧರ್ಮದವರಿಗೆ ಸಂವಿಧಾನದಲ್ಲಿ ಸಮಾನತೆಯನ್ನು ಕಲ್ಪಿಸಿರುವ ಅಂಬೇಡ್ಕರ್‍ರವರ ಆಶಯದಂತೆ ಪ್ರತಿಯೊಬ್ಬರು ನಡೆದುಕೊಂಡಾಗ ಮಾತ್ರ ಸಂವಿಧಾನಕ್ಕೆ ನಿಜವಾದ ಅರ್ಥ ಸಿಗುತ್ತದೆ. ಪೌರ ಕಾರ್ಮಿಕರು ಮಕ್ಕಳನ್ನು
ತಮ್ಮಂತೆಯೆ ಪೌರ ಕಾರ್ಮಿಕರನ್ನಾಗಿ ಮಾಡಬೇಡಿ. ಸಂವಿಧಾನದಡಿಯಲ್ಲಿ ಸಿಗುವ ಸೌಲತ್ತುಗಳನ್ನು ಬಳಸಿಕೊಂಡು ಶಿಕ್ಷಣವಂತರನ್ನಾಗಿಸಿ ದೊಡ್ಡ ಹುದ್ದೆಗಳಿಗೆ ಕಳಿಸಿ ಎಂದು ಮನವಿ ಮಾಡಿದರು.

ಚಿಕ್ಕಂದಿನಲ್ಲಿಯೇ ಸಾಕಷ್ಟು ಅವಮಾನ, ನೋವು, ಹಿಂಸೆಗಳನ್ನು ಅನುಭವಿಸಿದ ಡಾ.ಬಿ.ಆರ್.ಅಂಬೇಡ್ಕರ್ ನಮ್ಮ ಜನಕ್ಕೆ ಇಂತಹ ಸಂಕಷ್ಟ ಎದುರಾಗಬಾರದೆಂದು ಬಲಿಷ್ಟವಾದ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಸಂವಿಧಾನದ ಆಶಯಗಳಿಗೆ ಎಲ್ಲಿಯೂ ಧಕ್ಕೆಯಾಗಲು ಬಿಡಬಾರದೆಂದು ಹೇಳಿದರು.

ಪೌರ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಕೆ.ರಾಜಣ್ಣ, ಸಹ ಕಾರ್ಯದರ್ಶಿ ನಿಜಲಿಂಗಪ್ಪ, ಉಪಾಧ್ಯಕ್ಷರುಗಳಾದ ಕುಂಚಿಗನಹಾಳ್ ಮಹಾಲಿಂಗಪ್ಪ, ನಿಜಲಿಂಗಪ್ಪ, ಖಜಾಂಚಿ ಗೋವಿಂದಪ್ಪ ಸೇರಿದಂತೆ ಪದಾಧಿಕಾರಿಗಳು ಹಾಗೂ ಪೌರ ಕಾರ್ಮಿಕರು ಅಂಬೇಡ್ಕರ್‍ರವರ ಪರಿನಿಬ್ಬಾಣ ದಿನದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...