ಸುದ್ದಿಒನ್, ಬೆಂಗಳೂರು, ನವೆಂಬರ್.08 : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಸಿಕ್ಕಿದೆ. ಷರತ್ತು ಬದ್ಧ ಜಾಮೀನು ನೀಡಿರುವ ಹೈಕೋರ್ಟ್, ಚಿತ್ರದುರ್ಗ ಪ್ರವೇಶವನ್ನು ನಿರಾಕರಿಸಿದೆ. ಅಷ್ಟೆ ಅಲ್ಲ, ಜಾಮೀನು ಸಿಕ್ಕಿದರೂ ಬಿಡುಗಡೆ ಭಾಗ್ಯ ಮಾತ್ರ ಶಿವಮೂರ್ತಿ ಶ್ರೀಗಳ ಪಾಲಿಗೆ ಸಿಕ್ಕಿಲ್ಲ.
ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಕ್ಕೆ ಇನ್ನು ಜಾಮೀನು ಸಿಕ್ಕಿಲ್ಲ. ಮೊದಲು ದಾಖಲಾಗಿದ್ದ ಪ್ರಕರಣವೊಂದಕ್ಕೆ ಮಾತ್ರ ಜಾಮೀನು ಸಿಕ್ಕಿದೆ. ಆದರೆ ಚಿತ್ರದುರ್ಗ ಜಿಲ್ಲೆ ಪ್ರವೇಶ ಮಾಡದಂತೆ ಆದೇಶದಲ್ಲಿ ತಿಳಿಸಿದೆ.
2022ರಲ್ಲಿ ಜೈಲು ಸೇರಿದ್ದ, ಮುರುಘಾಶ್ರೀಗಳು ಅದಾಗಲೇ ಒಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿತ್ತು. ಬಳಿಕ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಚಿತ್ರದುರ್ಗ ಪ್ರವೇಶಿಸುವಂತಿಲ್ಲ ಎಂದು ಹೇಳಿದೆ. ಇದರ ನಡುವೆ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಜಾಮೀನು ಮಂಜೂರಾಗಿಲ್ಲ. ಒಂದು ವೇಳೆ ಆ ಪ್ರಕರಣದಲ್ಲೂ ಜಾಮೀನು ಸಿಕ್ಕಿದರೆ ಶ್ರೀಗಳು ಜೈಲಿನಿಂದ ಬಿಡುಗಡೆ ಹೊಂದಲಿದ್ದಾರೆ.