ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ನಗರದ ಜೆಸಿಆರ್ ಬಡಾವಣೆಯ ವಾಸಿ ಹಾಗೂ ಖ್ಯಾತ ನೇತ್ರ ತಜ್ಞರಾದ ಡಾ. ಉಜ್ಜಿನಪ್ಪ (75 ವರ್ಷ) ಇಂದು ಬೆಳಿಗ್ಗೆ ನಿಧನರಾದರು.
ಮೃತರು ಖ್ಯಾತ ದಂತ ವೈದ್ಯರಾದ ಪತ್ನಿ ಡಾ. ಶೋಭಾ, ಓರ್ವ ಪುತ್ರ ಖ್ಯಾತ ವೈದ್ಯರಾದ ಸಂತೋಷ್ ಉಜ್ಜನಪ್ಪ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ ಮೆದೇಹಳ್ಳಿಯ ಅವರ ಸ್ವಂತ ತೋಟದ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿರುತ್ತಾರೆ.
ಸಂತಾಪ : ಚಿತ್ರದುರ್ಗ ಮೆಡಿಕಲ್ ಅಸೋಸಿಯೇಷನ್, ಚಿತ್ರದುರ್ಗ ರೆಡ್ ಕ್ರಾಸ್ ಸಂಸ್ಥೆ, ಬಸವೇಶ್ವರ ಪುನರ್ ಜ್ಯೋತಿ ನೇತ್ರ ಭಂಡಾರ, ವಿ ಪಿ ಮತ್ತು ಜೆ ಸಿ ಆರ್ ಆ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಸೇರಿದಂತೆ ಇತರೆ ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











