Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪರಿಸರ ಸುಸ್ಥಿತಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಮುಂದಾಲೋಚನೆ ಶ್ಲಾಘನೀಯ: ಜಿ.ಎಂ. ಪಾಟೀಲ್ ತಿಪ್ಪೇಸ್ವಾಮಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್,  ಚಿತ್ರದುರ್ಗ. ಜು. 30 : ಪ್ರಸ್ತುತ ದಿನಮಾನದಲ್ಲಿ ಕಾಡಿನ ವಿನಾಶದಿಂದಾಗಿ ಉತ್ತಮ ಮಳೆಯಾಗದೆ ಕುಡಿಯುವ ನೀರು ಸಿಗದೇ ರೈತರಿಗೆ ಬೆಳೆ ಬೆಳೆಯಲಿಕ್ಕೆ ನೀರು ಸಿಗದೇ ಪರಿತಪಿಸು ವಂತಾಗಿದೆ. ಇಂತಹ ದಿನಮಾನದಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆ ಯವರು ತಮ್ಮ ಮುಂದಾಲೋಚನೆಯಿಂದ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಸಾಮಾಜಿಕ ಅರಣ್ಯೀಕರಣದಡಿ ಗಿಡನಾಟಿ ಕಾರ್ಯಕ್ರಮದ ಮೂಲಕ ಪರಿಸರವನ್ನು ಸುಸ್ಥಿತಿಗೆ ತರುವಂತಹ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀ ಚೌಡಮ್ಮ ದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಜಿಎಂ ಪಾಟೀಲ್ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಚಿತ್ರದುರ್ಗ ತಾಲ್ಲೂಕಿನ ಗೋಲ್ಲಹಳ್ಳಿ ಸಮೀಪದ ಹಿರೇಕೆರೆ ಕಾವಲು ಶ್ರೀ ಚೌಡಮ್ಮ ದೇವಿ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಡಾ ಡಿ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹತ್ತಾರು ಕಾರ್ಯಕ್ರಮಗಳು ನಡೆಯುತ್ತಾ ಬಂದಿವೆ. ಬಡವರ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. ಯುವ ಜನರು ಇಂತಹ ಕಾರ್ಯಕ್ರಮದಲ್ಲಿ ಕೈಜೋಡಿಸಿ ಪರಿಸರದ ಉಳಿವಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಕಮಲಾಕ್ಷ ಮಾತನಾಡಿ, ದಶಲಕ್ಷ ವೃಕ್ಷ ಅಭಿಯಾನದ ಮೂಲಕ ಗಿಡ ನಾಟಿ ಮಾಡುವಂತಹ ಕಾರ್ಯಕ್ರಮವನ್ನ ಸರ್ಕಾರ. ಸಂಘ ಸಂಸ್ಥೆಗಳ ಜೊತೆಗೂಡಿ ನಡೆಸುತ್ತಿದೆ. ಇಂದಿನ ಯುವಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ. ಉಸಿರಾಡಲು ಸಹ ಉತ್ತಮ ವಾದಂ ತಹ ಗಾಳಿಯು ಸಿಗದೆ ಮನುಷ್ಯರು ನಾನಾ ರೀತಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಒಂದೆಡೆ ಅತಿವೃಷ್ಟಿ ಒಂದಡೆ ಅನಾವೃಷ್ಟಿ ಕಾಣುತ್ತಿದೆ ಇದಕ್ಕೆ ಕಾರಣ ಮನುಷ್ಯನ ಸ್ವಾರ್ಥತೆ. ಇನ್ನಾದರೂ ಜಾಗೃತರಾಗಿ ಪರಿಸರವನ್ನು ಉಳಿಸಿ ಬೆಳೆಸಿ ಮುಂದಿನ ತಲೆಮಾರಿಗೆ ವರ್ಗಾವಣೆ ಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಯೋಜನೆ ಮುಖಾಂತರ ನೀಡಿರುವಂತಹ ಗಿಡಗಳನ್ನು ಉಳಿಸಿ ಬೆಳೆಸಿ ರಕ್ಷಿಸಬೇಕು ಹಾಗೂ ಅದರ ಫಲವನ್ನು ಪಡೆದುಕೊಳ್ಳುವಂತೆ ತಿಳಿಸಿ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮೂಲಕ ಜರುಗುವಂತಹ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಶ್ರೀ ಚೌಡಮ್ಮ ದೇವಿ ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಎಂ.ವೈ.ಟಿ ಸ್ವಾಮಿ ಮಾತನಾಡಿ,ಡಿ ವೀರೇಂದ್ರ ಹೆಗಡೆಯವರು ಸರ್ಕಾರ ಯಾವುದೇ ದೊಡ್ಡ ಸಂಘ ಸಂಸ್ಥೆಗಳು ಮಾಡಿದಂತಹ ಸಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ ಬಡವರ ಏಳಿಗೆಗೋಸ್ಕರ ಜನಮಂಗಳ ಕಾರ್ಯಕ್ರಮ ಮಧ್ಯವರ್ಜನ ಶಿಬಿರ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ನೆರವು ಅನಾಥರಿಗೆ. ವಾತ್ಸಲ್ಯ ಮನೆ. ಹೀಗೆ ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ ಸಮಾಜದ ಅಭಿವೃದ್ಧಿಗೆ ಬೇಕಾದಂತಹ ಎಲ್ಲಾ ಕ್ಷೇತ್ರದಲ್ಲಿಯೂ ಕೂಡ ಸಹಾಯ ಹಸ್ತ ನೀಡುತ್ತಿದ್ದಾರೆ ಇದರ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಯಾಗಬೇಕೆಂದು ತಿಳಿಸಿ ನಮ್ಮ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶದಲ್ಲಿ ತಾವು ಕೊಟ್ಟಂತಹ ಗಿಡಗಳನ್ನು ಸುರಕ್ಷಿತವಾಗಿ ಬೆಳೆಸಿ ಉಳಿಸುತ್ತೇವೆ ಸಂರಕ್ಷಿಸುತ್ತೇವೆ ಎಂಬ ಭರವಸೆಯನ್ನು ನೀಡಿದರು.

ಜಿಲ್ಲಾ ನಿರ್ದೇಶಕರು ಗಿಡಗಳನ್ನು ದೇವಸ್ಥಾನ ಸಮಿತಿಯವರಿಗೆ ಹಸ್ತಾಂತರ ಮಾಡಿದರು ನಂತರ ಗಿಡ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲೂಕಿನ ಯೋಜನಾಧಿಕಾರಿಗಳಾದ ಚಂದ್ರಹಾಸ್. ವಲಯದ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು ಸೇವಾ ಪ್ರತಿನಿಧಿ ಊರಿನ ಸ್ವಸಹಾಯ ಸಂಘದ ಸದಸ್ಯರು ರೈತರು ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now