ಚಿತ್ರದುರ್ಗ : ಡಿಆರ್ಡಿಓ ಪರೀಕ್ಷಾರ್ಥ ವಿಮಾನ ಪಥನ : ತಪ್ಪಿದ ಬಾರೀ ಅನಾಹುತ : ವಿಡಿಯೋ ನೋಡಿ…!

1 Min Read

 

ಸುದ್ದಿಒನ್, ಚಿತ್ರದುರ್ಗ, ಆ.20 : ಡಿಆರ್ಡಿಓ ಪರೀಕ್ಷಾರ್ಥ ಮಾನವ ರಹಿತ ಡ್ರೋನ್‌ ವಿಮಾನ ಪತನಗೊಂಡು ನೆಲಕ್ಕುರುಳಿದೆ.

ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

 

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಕುದಾಪುರ ಬಳಿಯ ವಾಯುನೆಲೆಯಿಂದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಭಾನುವಾರ ಬೆಳಿಗ್ಗೆ ಪರೀಕ್ಷಾರ್ಥ ಹಾರಾಟ ನಡೆಸಿತ್ತು. ಸ್ವಲ್ಪ ದೂರ ಕ್ರಮಿಸಿದ ನಂತರ ಈ
ಜೆಟ್ ವಿಮಾನವು ನಿಯಂತ್ರಣ ತಪ್ಪಿ ವದ್ದಿಕೆರೆ ಗ್ರಾಮದ ಹೊಲದಲ್ಲಿ ಪತನವಾಗಿದೆ. ವಿಮಾನ ಹೊಲದಲ್ಲಿ ಪತನವಾಗಿದ್ದರಿಂದ ಬಾರೀ ಅನಾಹುತ ತಪ್ಪಿದಂತಾಗಿದೆ. ಈ ವೇಳೆ ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂಬುದು ಪ್ರಾಥಮಿಕವಾಗಿ ತಿಳಿದು ಬಂದಿದೆ.

ವಿಮಾನ ಬಿದ್ದ ರಭಸಕ್ಕೆ ಜೋರಾಗಿ ಶಬ್ದ ಕೇಳಿ ಬಂದಿದೆ. ತಕ್ಷಣವೇ ಊರಿನ ಗ್ರಾಮಸ್ಥರು ವಿಮಾನ ಬಿದ್ದ ಸ್ಥಳಕ್ಕೆ ದೌಡಾಯಿಸಿದ್ದಾರೆ. ವಿಮಾನದ ಪಳಯುಳಿಕೆಗಳನ್ನು ಕುತೂಹಲದಿಂದ ವೀಕ್ಷಿಸಿ ದೃಶ್ಯಗಳನ್ನು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.

 

ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಡಿಆರ್ಡಿಓ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ನಂತರವಷ್ಟೇ ಘಟನೆಗೆ ನಿಖರವಾದ ಕಾರಣ ತಿಳಿದು ಬರಬರಲಿದೆ.

Share This Article
Leave a Comment

Leave a Reply

Your email address will not be published. Required fields are marked *