ಚಿತ್ರದುರ್ಗ | ಕೇಂದ್ರ ಗೃಹ ಸಚಿವ ಅಮಿತ್‍ಷಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಿ : ಕಾನೂನು ವಿದ್ಯಾರ್ಥಿ ಒಕ್ಕೂಟ ಒತ್ತಾಯ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : : ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿರುವ ಕೇಂದ್ರ ಗೃಹ ಸಚಿವ ಅಮಿತ್‍ಷಾರವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಕಾನೂನು ವಿದ್ಯಾರ್ಥಿ ಒಕ್ಕೂಟದಿಂದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಧಿಕ್ಕಾರಗಳನ್ನು ಕೂಗಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್‍ರವರನ್ನು ಸ್ಮರಣೆ ಮಾಡುವ ಬದಲು ದೇವರನ್ನು ಜಪಿಸಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆಂದು ಅಮಿತ್‍ಷಾ ಸಂಸತ್‍ನಲ್ಲಿ ಹೇಳಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೆ ದೇಶದ ಜನರ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ ಕಾನೂನು ವಿದ್ಯಾರ್ಥಿ ಒಕ್ಕೂಟದವರು ಅಮಿತ್‍ಷಾ ಲೋಕಸಭೆ ಪ್ರವೇಶಿಸಿದ್ದಾರೆಂದರೆ ಸಂವಿಧಾನದಲ್ಲಿ ನೀಡಿರುವ ಅಧಿಕಾರ ಕಾರಣ ಎನ್ನುವುದನ್ನು ಮರೆಯಬಾರದೆಂದು ಆಕ್ರೋಶ ವ್ಯಕ್ತಪಡಿಸಿರು.

ಅಂಬೇಡ್ಕರ್ ಸಂವಿಧಾನ ಕುರಿತು ಸಂಸತ್‍ನಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಇಂತಹ ಉದ್ದಟತನದ ಮಾತುಗಳನ್ನಾಡಿರುವ ಅಮಿತ್‍ಷಾ ಇಡಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಪ್ರಧಾನಿ ಮೋದಿರವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಮಿತ್‍ಷಾರವರನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.
ಅಕಾಶ್ ಇನ್ನು ಮೊದಲಾದವರು ಪ್ರತಿಭಟನೆಯಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *