Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಎಸ್ಸಿ, ಎಸ್ಟಿ ಮೀಸಲಾತಿ ರದ್ದು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಡಿಎಸ್ಎಸ್ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 06 : ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಹೈಕೋರ್ಟ್ ರದ್ದುಪಡಿಸಿರುವುದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವಂತೆ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಡಿಸಿ. ಕಚೇರಿ ಸಹಾಯಕಿ ಸುಜಾತರವರ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ ಪರಿಶಿಷ್ಟ ಜಾತಿಗೆ ಶೇ.15 ರಿಂದ 17, ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ 4 ಪರ್ಸೆಂಟ್ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಹಿಂದುತ್ವ ವಾದಿಗಳು ಹೈಕೋರ್ಟ್‍ಗೆ ರಿಟ್ ಸಲ್ಲಿಸಿದ ಪರಿಣಾಮ ಮೀಸಲಾತಿಯನ್ನು ರದ್ದುಪಡಿಸಿರುವುದು ಎಸ್ಸಿ, ಎಸ್ಟಿ.ಗಳಿಗೆ ಅನ್ಯಾಯವಾಗಿದೆ. ತಡ ಮಾಡದೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಧಾನಿ ನರೇಂದ್ರಮೋದಿರವರ ಬಳಿ ನಿಯೋಗ ತೆಗೆದುಕೊಂಡು ಹೋಗಿ ನೈನ್ ಷೆಡ್ಯೂಲ್‍ಗೆ ಸೇರಿಸಿ ತಿದ್ದುಪಡಿ ತಂದು ಹೆಚ್ಚಳವಾಗಿರುವ ಮೀಸಲಾತಿಯನ್ನು ಮುಂದುವರೆಸುವಂತೆ ಮನವಿ ಮಾಡಿದರು.

ಶೇ.50 ರಷ್ಟಿದ್ದ ಮೀಸಲಾತಿಯನ್ನು 56 ಕ್ಕೆ ಹೆಚ್ಚಳ ಮಾಡಿರುವುದನ್ನು ಅ.12 ರಂದು ಹೈಕೋರ್ಟ್ ರದ್ದುಪಡಿಸಿದೆ. ಅದಕ್ಕಾಗಿ ಸಂವಿಧಾನದ ಒಂಬತ್ತನೆ ಷೆಡ್ಯೂಲ್‍ಗೆ ಸೇರಿಸಿ ಕಾನೂನು ತಿದ್ದುಪಡಿ ತರಬೇಕು. ಸ್ವಂತ ನಿವೇಶನವಿಲ್ಲದ ಬಡವರಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸುವುದಕ್ಕಾಗಿ ಸರ್ಕಾರಿ ಇಲ್ಲವೇ ಖಾಸಗಿ ಜಮೀನುಗಳನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಜೂ.9 ರ ಅವರ ಜನ್ಮದಿನದವನ್ನು ಸರ್ಕಾರವೇ ಆಚರಿಸಬೇಕು. ಭೂ ಕಂದಾಯ ಕಾಯ್ದೆಯ ನಮೂನೆ-57 ರಡಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು. ಸರ್ಕಾರಿ ಜಾಗದಲ್ಲಿ ನೆಲೆಸಿರುವ ಕುಟುಂಬಗಳ ಜಾಗವನ್ನು 94 ಸಿ ಮತ್ತು 94 ಸಿಸಿ ಅಡಿ ಸಕ್ರಮಗೊಳಿಸಿ ಹಕ್ಕುಪತ್ರ ಕೊಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ದಿಗಾಗಿ ಕಾಯ್ದಿರಿಸಿರುವ ಸಾವಿರಾರು ಕೋಟಿ ರೂ.ಗಳ ಅನುದಾನ ದುರ್ಬಳಕೆಯಾಗಿರುವುದನ್ನು ತಡೆಯಲು ಎಸ್ಸಿಪಿ, ಟಿಎಸ್ಪಿ ಕಾಯಿದೆ-2013 ರ ಸೆಕ್ಷನ್ 7 (ಸಿ) ಯನ್ನು ರದ್ದುಪಡಿಸಬೇಕು. ಜಾತಿ ಗಲಭೆ ಮತ್ತು ಕೋಮು ಗಲಭೆಗಳಿಂದ ಮೃತಪಟ್ಟ ಪರಿಶಿಷ್ಟರ ಕುಟುಂಬಗಳಿಗೆ ಈಗ ನೀಡುತ್ತಿರುವ 8.25 ಲಕ್ಷ ರೂ.ಗಳ ಬದಲಿಗೆ 25 ಲಕ್ಷ ರೂ.ಗಳ ಪರಿಹಾರ ಹಾಗೂ ಸರ್ಕಾರಿ ನೌಕರಿಯನ್ನು ಒದಗಿಸಬೇಕು. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 72186 ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ವಸತಿ ನಿಲಯ, ವಸತಿ ಶಾಲೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವುದು ಸೇರಿದಂತೆ ಹದಿನೈದು ಬೇಡಿಗಳನ್ನು ಈಡೇರಿಸುವಂತೆ
ಕೆಂಗುಂಟೆ ಜಯಪ್ಪ ಸರ್ಕಾರವನ್ನು ಒತ್ತಾಯಿಸಿದರು.

ಸುಂದರಮೂರ್ತಿ, ನವೀನ್ ಮದ್ದೇರು, ಶ್ರೀನಿವಾಸ್ ಬಂಡೆಹಟ್ಟಿ, ತಿಪ್ಪೇಸ್ವಾಮಿ, ಮಂಜುನಾಥ ಸಾಂತೇನಹಳ್ಳಿ, ಮಂಜು ಟಿ.ಎಮ್ಮಿಗನೂರು, ಮಂಜು ಉಡುಗೊರೆ, ಭಾರತಿ
ಅನಿತ, ರವಿ ಚಿತ್ರಹಳ್ಳಿ, ಡಿ.ಶಿವಣ್ಣ, ಶಿವಕುಮಾರ್, ಪ್ರಭಾಕರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now