ಚಿತ್ರದುರ್ಗ | ವಾಲ್ಮೀಕಿ ನಾಯಕ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ; ಕೆ.ನಾಗರಾಜ್ ನೂತನ ಅಧ್ಯಕ್ಷ

1 Min Read

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 03 : ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘದ ನೂತನ ಅಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆಯ ಕೆ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಡಾ.ಹೆಚ್.ಗುಡ್ಡದೇಶ್ವರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು ಅವರ ವಯೋ ನಿವೃತ್ತಿಯಿಂದ ತೆರವಾದಂತಹ ಸ್ಥಾನಗಳಿಗೆ ಈಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಣ್ಣ ನೀರಾವರಿ ಇಲಾಖೆಯ ಎಸ್.ಬಿ.ರವಿಶಂಕರ್, ಖಜಾಂಚಿಯಾಗಿ ಜೆ.ಎಸ್.ರವಿಕುಮಾರ್ (ಪೊಲೀಸ್ ರವಿ) ಅವರನ್ನು ನೇಮಕ ಮಾಡಲಾಗಿದೆ. ಸಂಸ್ಥಾಪಕ ಅಧ್ಯಕ್ಷರಾಗಿ ಸಿ.ಜೆ.ಶ್ರೀನಿವಾಸ್ ಮುಂದುವರೆದಿದ್ದು, ಗೌರವಾಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ಬಿ.ವಿಮಲಾಕ್ಷಿ, ಉಪಾಧ್ಯಕ್ಷರಾಗಿ ಪಿಆರ್‍ಇಡಿ ಕೆ.ಹರೀಶ್, ಜಂಟಿ ಕಾರ್ಯದರ್ಶಿಯಾಗಿ ಕೃಷಿ ಇಲಾಖೆಯ ಟಿ.ಪಿ.ರಂಜಿತಾ, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಲಸಂಪನ್ಮೂಲ ಇಲಾಖೆಯ ಎನ್.ಹೆಚ್.ಚಂದ್ರಪ್ಪ, ಕೆ.ಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್.ಡಿ.ಸುಮಂತ್ ಹಾಗೂ ಶಿಕ್ಷಣ ಇಲಾಖೆಯ ಕೆ.ಕೆ.ಓಬಳಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘ ಪ್ರಕಟಣೆ ತಿಳಿಸಿದೆ.

Share This Article
Enable Notifications OK No thanks