Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 09 : ಪ್ರಧಾನಿ ನರೇಂದ್ರ ಮೋದಿಯವರು ಪರಿಸರದ ಬಗ್ಗೆ ಹಾಗೂ ಸ್ವಚ್ಛತೆ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಆದ್ದರಿಂದ ದೇವಸ್ಥಾನದ ಆವರಣದಲ್ಲಿ ನಮ್ಮ ಎಲ್ಲ ಮುಖಂಡರು ಸೇರಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದೇವೆ. ಬುಧವಾರದ ದಿನಕ್ಕೆ ನರೇಂದ್ರ ಮೋದಿಯವರು ಪ್ರಧಾನಿ ಆಗಿ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದಾರ್ಥ್ ಹೇಳಿದರು.

ತಾಲ್ಲೂಕಿನ ಹುಲ್ಲೂರು ಸಿಂಗಾಪುರ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ಮಂಡಲದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮ ಮತ್ತು ನರೇಂದ್ರ ಮೋದಿಯವರು 12 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ
ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ನಾಗರಾಜ್, ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಕುಮಾರ್, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಪರಮೇಶ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಸಚಿನ್, ಮಹಿಳಾ ಮೋರ್ಚ ಅಧ್ಯಕ್ಷರಾದ ರಾಧ, ಕವಿತಾ, ಸಿರಿ
ಪಕ್ಷದ ಕಾರ್ಯಕರ್ತರು ಗ್ರಾಮದ ಮುಖಂಡರ ಹುಲ್ಲೂರು ಸಿಂಗಾಪುರ ಗ್ರಾಮಸ್ಥರು ಉಪಸ್ಥಿತರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now