ಬೆಂಗಳೂರು : ಚುನಾವಣೆ ಸಮೀಪಿಸುತ್ತಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ, ಪಕ್ಷಗಳ ಬದಲಾವಣೆಗಳು ಶುರುವಾಗಿದೆ. ಇದೀಗ ಚಿತ್ರದುರ್ಗದ ಮಾಜಿ ಸಂಸದ ಹಾಗೂ ನಟ ಶಶಿಕುಮಾರ್ ಮತ್ತು ತುಮಕೂರು ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಯಾಗಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ನಳೀನ್ ಕುಮಾರ್ ಕಟೀಲು ಈ ಇಬ್ಬರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ಹಾರಿಸಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಕರ್ನಾಟಕದ ರಾಜಕೀಯ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡು ಅಧಿಕಾರವನ್ನು ಕಳೆದುಕೊಂಡಿದೆ. ಈಗ ಕಾಂಗ್ರೆಸ್ ಗೆ ಜನಮತ ಇಲ್ಲ. ಬಹುತೇಕ ಸಚಿವರು ಸೋತಿದ್ದರು, ಕಾಂಗ್ರೆಸ್ ಹಿಂಬದಿಯಿಂದ ಅಧಿಕಾರವನ್ನು ಪಡೆದುಕೊಂಡಿತ್ತು. ಜೆಡಿಎಸ್ ಜೊತೆಗಿನ ಸಮ್ಮಿಶ್ರ ಸರ್ಕಾರ ಕೂಡ ವಿಫಲವಾಗಿದೆ. ಬಿಜೆಪಿ ಪರ ಸಂಪೂರ್ಣ ದಿಕ್ಸೂಚಿ ಕಾಣುತ್ತಿದೆ ಎಂದಿದ್ದಾರೆ.


