ಚಿತ್ರದುರ್ಗ : ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ನಗರದ ಖಾಸಗಿ ಹೋಟೆಲ್ ಮತ್ತು ಬಾರ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುವ ವೇಳೆ
ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಬಾರಿ ಮೊತ್ತದ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿ ಮೊದಲ ಹಂತದ ಕಂತನ್ನು ಬಾರ್ ಮಾಲೀಕರಿಂದ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.
ಅಧಿಕಾರಿಯು ಬಾರಿ ಮೊತ್ತದ ಹಣಕ್ಕೆ
ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಹೋಟೆಲ್ ಮತ್ತು ಬಾರ್ ಮಾಲೀಕರು ದೂರನ್ನು ಎಸಿಬಿ ಅಧಿಕಾರಿಗಳಿಗೆ ನೀಡಿದ್ದರು.
ದಾವಣಗೆರೆ ಎಸಿಬಿ ಡಿವೈಎಸ್ಪಿ ಹಾಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಬಕಾರಿ ಅಧಿಕಾರಿಯನ್ನು ಬಂಧಿಸಿದ್ದಾರೆ. ಜೊತೆಗೆ
ಕಾರು ಚಾಲಕನನ್ನು ಸಹ ಬಂಧಿಸಿದ್ದಾರೆ.
ಎಸಿಬಿ ಅಧಿಕಾರಿಗಳು ಬಂಧಿಸಿ ಪ್ರಕರಣ ದಾಖಿಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.