Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ತುಂಗಾದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 18 : ತುಂಗಾದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸಿ ರೈತರ ತೋಟಗಳನ್ನು ಉಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಭದ್ರಾ ಮೇಲ್ದಂಡೆ ಯೋಜನಾ ವಲಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುಖ್ಯ ಇಂಜಿನಿಯರ್ ರವಿಶಂಕರ್‍ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಮಳೆಯಿಲ್ಲದೆ ಜಿಲ್ಲೆಯ ಆರು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಮಧ್ಯ ಕರ್ನಾಟಕ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಹರಿಸಲು ಯೋಜನೆ ಪ್ರಾರಂಭವಾಗಿ 24 ವರ್ಷಗಳು ಕಳೆದಿದ್ದರೂ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದೆ. ಕಾಮಗಾರಿಯನ್ನು ಚುರುಕುಗೊಳಿಸಿ ಜಿಲ್ಲೆಗೆ ನೀರು ಹರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ರೈತ ಮುಖಂಡರುಗಳಾದ ಕೆ.ಟಿ.ತಿಪ್ಪೇಸ್ವಾಮಿ, ರೆಡ್ಡಿಹಳ್ಳಿ ವೀರಣ್ಣ, ಚಿಕ್ಕಬ್ಬಿಗೆರೆ ನಾಗರಾಜ್, ಆರ್.ಬಿ.ನಿಜಲಿಂಗಪ್ಪ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಕಾಂತರಾಜ್, ಸಿದ್ರಾಮಣ್ಣ
ತಿಮ್ಮಣ್ಣ, ಮಲ್ಲಿಕಾರ್ಜುನ್, ಕೊಟ್ರಬಸಪ್ಪ, ತಿಪ್ಪೇಸ್ವಾಮಿ, ಮಾರುತಿ, ಸದಾಶಿವ, ಸಿದ್ದಣ್ಣ, ರಾಮರೆಡ್ಡಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now