ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 09 : ನಗರದ ಹೊರವಲಯದ ಹೊಸ ಹೈವೆಯಲ್ಲಿ ಇಂದು ಬೆಳಿಗ್ಗೆ 11 : 30 ರ ಸುಮಾರಿಗೆ ಮೆದೇಹಳ್ಳಿ ಮತ್ತು ಗುಡ್ಡದರಂಗವ್ವನಹಳ್ಳಿಯ ಮಧ್ಯೆ ಐರಾವತ ಹೋಟೆಲ್ ಸಮೀಪ ಎಡಬದಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಇನ್ನೋವಾ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಪ್ರಯಾಣಿಕನಿಗೆ ಗಾಯಗಳಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…